ಕೂಡ್ಲಿಗಿ (ವಿಜಯನಗರ ಜಿಲ್ಲೆ): ಕಬ್ಬಿಗೆ ಎಫ್ಆರ್ಪಿ ಮತ್ತು ಎಂಎಸ್ಪಿ ಎರಡನ್ನೂ ನಿಗದಿ ಮಾಡುವುದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಭಾನುವಾರ ಇಲ್ಲಿ 74 ಕೆರೆ ತುಂಬಿಸುವ ಯೋಜನೆಗೆ ಚಾಲನೆ ಹಾಗೂ ₹1,250 ಕೋಟಿಗೂ ಅಧಿಕ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ/ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
.ಬೆಳಗಾವಿ| ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ: ಕರವೇಯಿಂದ ವಿಜಯೋತ್ಸವ ಆಚರಣೆ.
‘ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ನಾಟಕ ಮಾಡಿದರು. ಅವರು ಕಬ್ಬು ಬೆಳೆದ ರೈತರ ಜತೆಗಲ್ಲ, ಪ್ರಧಾನಿ, ಗೃಹ ಸಚಿವ, ಪ್ರಲ್ಹಾದ ಜೋಷಿ ಮನೆಯಲ್ಲಿ ಮಲಗಬೇಕಿತ್ತು. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡಿ ಕೆಲಸ ಮಾಡಿದೆ’ ಎಂದು ತಿಳಿಸಿದರು.
.ಬೆಳಗಾವಿ | ಪ್ರತಿ ಟನ್ ಕಬ್ಬಿಗೆ ₹3,300 ನಿಗದಿ: ಕರವೇಯಿಂದ ವಿಜಯೋತ್ಸವ.
ಶಾಸಕರಿಗೆ ಶ್ಲಾಘನೆ: 1.70 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದರು.

ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ ಕ್ಷೇತ್ರಕ್ಕೆ ₹1,750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತಿ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದರು.

ಎರಡು ವರ್ಷದಲ್ಲಿ ನಮ್ಮ ಸರ್ಕಾರ ₹1 ಲಕ್ಷ ಕೋಟಿಯನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದೆ ಎಂದು ಲೆಕ್ಕ ಮುಂದಿಟ್ಟರು.

ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ ಎಂದು ಕುಟುಕಿದರು.

ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.