ಹೂವಿನಹಡಗಲಿ (ವಿಜಯನಗರ): ತಾಲ್ಲೂಕಿನ ಹಿರೇಹಡಗಲಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಯುಗಾದಿ ಅಮವಾಸ್ಯೆಯಂದು ಬೆಳಿಗ್ಗೆ ಶಿವಲಿಂಗಕ್ಕೆ ಸೂರ್ಯರಶ್ಮಿಗಳ ಸಿಂಚನವಾಯಿತು. ಗ್ರಾಮದ ಭಕ್ತರು ಅಪರೂಪದ ಕ್ಷಣವನ್ನು ವೀಕ್ಷಿಸಿ ಸಂಭ್ರಮಿಸಿದರು.

ಸೂರ್ಯೋದಯ ವೇಳೆ ಸೂರ್ಯರಶ್ಮಿಗಳು ಎರಡು ನಿಮಿಷ ನೇರವಾಗಿ ಶಿವಲಿಂಗಕ್ಕೆ ಸ್ಪರ್ಶಿಸಿದವು. ಅಮವಾಸ್ಯೆ ಪ್ರಯುಕ್ತ ದೇವಸ್ಥಾನದ ಅರ್ಚಕರು ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಸೂರ್ಯರಶ್ಮಿಗಳು ಸ್ಪರ್ಶಿಸಿದ ನಂತರವೂ ವಿಶೇಷ ಪೂಜೆಯೊಂದಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು. ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಈ ದೃಶ್ಯವನ್ನು ವೀಕ್ಷಿಸಿ ಪುಳಕಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.