ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತಮಗೆ ಸೂಕ್ತ ಹೊಣೆಗಾರಿಕೆ ನೀಡದೆ ಮೂಲೆಗುಂಪು ಮಾಡಿದ್ದಕ್ಕೆ ಪರೋಕ್ಷ ಬೇಸರ ವ್ಯಕ್ತಪಡಿಸಿದ ಕವಿತಾ ಸದ್ಯ ಸಂಘದ ಚಟುವಟಿಕೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ರಾಜಕೀಯದಿಂದ ತಟಸ್ಥವಾಗಿರುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ತಮ್ಮ ಆಯ್ಕೆಯನ್ನು ಮುಕ್ತವಾಗಿರಿಸಿಕೊಂಡಿರುವ ಸುಳಿವು ನೀಡಿದರು.