ಈ ವಿದ್ಯಮಾನದ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ, ಶಾಲೆಯಲ್ಲಿ ಸಮಸ್ಯೆ ಇರುವುದು ಗೊತ್ತಾಗಿದೆ, ತಕ್ಷಣ ಸ್ಥಳಕ್ಕೆ ತೆರಳಲು ಬಿಇಒ ಅವರಿಗೆ ಸೂಚಿಸಿದ್ದೇನೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಕಾನೂನು ರೀತ್ಯಾ ಏನು ಕ್ರಮ ಕೈಗೊಳ್ಳಬಹದೋ ಅದನ್ನು ಮಾಡಲಿದ್ದೇವೆ’ ಎಂದು ಹೇಳಿದರು.
ವಿಜಯನಗರ: ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಸಮೀಪದ 114 ಡಣಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ನಾಗಲಕ್ಷ್ಮಿ ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಪ್ರಧಾನ ದ್ವಾರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ.#education#protestpic.twitter.com/fGR8utjYPc