ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಗರಿಬೊಮ್ಮನಹಳ್ಳಿ: ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಮನೆಯಲ್ಲಿ ಕಳ್ಳತನ

Published 3 ಜೂನ್ 2024, 10:31 IST
Last Updated 3 ಜೂನ್ 2024, 10:31 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ರವೀಶ್‌ ಮೇಟಿ ಎಂಬುವವರ ಮನೆಯಲ್ಲಿ ಭಾನುವಾರ ರಾತ್ರಿ ಕಳ್ಳತನವಾಗಿದ್ದು, ₹3.92 ಲಕ್ಷ ಮೌಲ್ಯದ 80ಗ್ರಾಂ ಬಂಗಾರದ ಆಭರಣಗಳು ಮತ್ತು ₹8 ಸಾವಿರ ನಗದನ್ನು ಕಳ್ಳರು ದೋಚಿದ್ದಾರೆ.

ಹಳೇ ಊರಿನ ಸಾಯಿ ಬಡಾವಣೆಯಲ್ಲಿ ವಾಸ ಇರುವ ತಂಬ್ರಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರವೀಶ್‌ ಅವರು ರಾತ್ರಿ ಊಟ ಮಾಡಿ, 8ರಿಂದ 8.30ರ ನಡುವೆ ಮನೆಯ ಬಾಗಿಲು ಚಿಲಕ ಹಾಕಿಕೊಂಡು ಪಕ್ಕದ ರಸ್ತೆಯಲ್ಲಿ ವಾಯುವಿಹಾರ ಹೋಗಿದ್ದಾಗ ಈ ಕಳ್ಳತನ ನಡೆದಿದೆ.

ಪಿಎಸ್‍ಐ ಮಾನಪ್ಪ ವಾಲ್ಮೀಕಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಪೊಲೀಸ್ ಶ್ವಾನದಳದ ತಂಡ ಬಂದು ಪರಿಶೀಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT