ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೆಕ್ಕಲಕೋಟೆ | ಚಿನ್ನಾಭರಣ ಕಳವು

Published 23 ಜೂನ್ 2024, 15:16 IST
Last Updated 23 ಜೂನ್ 2024, 15:16 IST
ಅಕ್ಷರ ಗಾತ್ರ

ತೆಕ್ಕಲಕೋಟೆ: ಪಟ್ಟಣದ 6ನೇ ವಾರ್ಡಿನ ನಿವಾಸಿ ಎಂ. ಹೊನ್ನೂರ ಸಾಬ್ ಅವರ ಮನೆಯಲ್ಲಿ ₹1.49 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೊನ್ನೂರಸಾಬ್ ಅವರು ಬೇರೆ ಊರಿಗೆ ಹೋದ ಸಂದರ್ಭದಲ್ಲಿ ಕಳ್ಳರು ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಸಿಪಿಐ ಸುಂದರೇಶ್, ಪಿಎಸ್‌ಐ ಶಾಂತಮೂರ್ತಿ ನೇತೃತ್ವದಲ್ಲಿ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ತಂಡವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT