ಸೋಮವಾರ, ಮಾರ್ಚ್ 27, 2023
22 °C

ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ: ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ(ವಿಜಯನಗರ): ‘ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲೂ ಹೇಳಿಲ್ಲ. ಆದರೂ ಅದರ ಬಗ್ಗೆ ಚರ್ಚೆ ಆಗುತ್ತಿದೆ. ಸದ್ಯಕ್ಕಂತೂ ಸಿ.ಎಂ. ಬದಲಾವಣೆಯ ಪ್ರಶ್ನೆಯೇ ಇಲ್ಲ’ ಎಂದು ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್‌ ಸ್ಪಷ್ಟಪಡಿಸಿದರು.

‘ಸಿ.ಎಂ. ಬದಲಾವಣೆ ಅನ್ನೋದು ಈ ಹೊತ್ತಿನ ದೊಡ್ಡ ಸುದ್ದಿಯಷ್ಟೇ. ಆದರೆ, ಬದಲಾವಣೆಯ ಪ್ರಶ್ನೆಯೇ ಇಲ್ಲ. ಬಿಜೆಪಿ ರಾಷ್ಟ್ರೀಯ ಶಿಸ್ತಿನ ಪಕ್ಷ. ಇತ್ತೀಚೆಗೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಯಾವ ರೀತಿ ಆಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ಹೇಳಿದರು.

‘ಈಗಾಗಲೇ ಎರಡು ವರ್ಷಗಳಿಂದ ಯಶಸ್ವಿಯಾಗಿ ಸರ್ಕಾರ ಕೆಲಸ ನಿರ್ವಹಿಸುತ್ತಿದೆ. ಇನ್ನೆರಡು ವರ್ಷ ಕೂಡ ಇದೇ ರೀತಿ ಉತ್ತಮ ಆಡಳಿತ ನೀಡಲಾಗುವುದು. ಒಂದುವೇಳೆ ಯಾವುದೇ ರೀತಿಯ ಬದಲಾವಣೆ ಮಾಡಬೇಕಾದರೆ ಅದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು