ಕೂಡ್ಲಿಗಿ (ವಿಜಯನಗರ ಜಿಲ್ಲೆ): ‘ಫೆಬ್ರುವರಿ 5ರ ಬಳಿಕ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿಯಾಗುವೆ. ಸಂವಹನ ಕೊರತೆ ಮತ್ತು ಇನ್ನಿತರ ಸಮಸ್ಯೆಗಳಿಂದ ಆಗಿರುವ ಗೊಂದಲವನ್ನು ಪಕ್ಷದ ನಾಯಕರು ಸರಿಪಡಿಸುವ ವಿಶ್ವಾಸವಿದೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

‘ಜನಾರ್ದನ ರೆಡ್ಡಿ ಪಕ್ಷದ ಕಾರ್ಯಕರ್ತರೇ ಹೊರತು ವರಿಷ್ಠರಲ್ಲ. ಪಕ್ಷ ತೊರೆಯುವಂತೆ ಅವರು ಹೇಳಿದ್ದಕ್ಕೆ ಮಹತ್ವ ಕೊಡಬೇಕಿಲ್ಲ. ವರಿಷ್ಠರ ಇಚ್ಛೆಯಂತೆ ನಾನು ಪಕ್ಷದಲ್ಲೇ ಇರುತ್ತೇನೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಯತ್ನಾಳ, ರಮೇಶ್ ಜಾರಕಿಹೊಳಿ, ಸುಧಾಕರ್ ಅವರೆಲ್ಲ ಕೆಲ ವ್ಯಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆಯೇ ಹೊರತು ಪಕ್ಷದ ವಿರುದ್ಧ ಮಾತನಾಡಿಲ್ಲ. ಅವರೆಲ್ಲ ಇದ್ದರಷ್ಟೇ ಪಕ್ಷ ಸಂಘಟನೆ ಸಾಧ್ಯ. ಪ್ರಶ್ನಾತೀತ ನಾಯಕ ಯಡಿಯೂರಪ್ಪ ಅವರಂತೆಯೇ ವಿಜಯೇಂದ್ರ ಕೂಡ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು’ ಎಂದರು.

‘2028ರಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ಗುರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸುತ್ತೇವೆ. ಪಕ್ಷ ಬಯಸಿದರೆ ಮುಖ್ಯಮಂತ್ರಿ ಆಗಲು ನಾನು ಸಿದ್ಧ’ ಎಂದರು.

Quote - ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಐದು ಕಡೆ ಮೀಸಲು ಕ್ಷೇತ್ರಗಳಿದ್ದು ಎಲ್ಲಾ ಕಡೆಯಿಂದ ಸ್ಪರ್ಧಿಸಲು ನನಗೆ ಆಹ್ವಾನವಿದೆ. ಯಾವ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುವರು.. ಶ್ರೀರಾಮುಲು ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.