ಹೊಸಪೇಟೆ (ವಿಜಯನಗರ): ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.
ಬಿಜೆಪಿಯಿಂದ ಇಲ್ಲಿನ ಆಜಾದ್ ನಗರದ ಉಮರ್ ಫಂಕ್ಷನ್ ಹಾಲ್‌ನಲ್ಲಿ ಸೋಮವಾರ ಏರ್ಪಡಿಸಿದ್ದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಪಕ್ಷ ಎಲ್ಲ ಜಾತಿ, ಜನಾಂಗದವರ ಕಲ್ಯಾಣಕ್ಕೆ ಕೆಲಸ ಮಾಡುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೂ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರ ಬಗ್ಗೆ ಸೂಕ್ತ ಮಾಹಿತಿ ಪಡೆದು ಲಾಭ ಪಡೆಯಬೇಕೆಂದು ತಿಳಿಸಿದರು.
ಇದೇ ವೇಳೆ ಅಂಗವಿಕಲರಿಗೆ ಮೂರು ಚಕ್ರದ ವಾಹನಗಳನ್ನು ವಿತರಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ವಕ್ಫ್ ಮಂಡಳಿ ಜಿಲ್ಲಾಧ್ಯಕ್ಷ ಟಿಂಕರ್ ರಫೀಕ್, ಹಮೀದ್, ಸಮಿವುಲ್ಲಾ, ಸಿದ್ದಾರ್ಥ ಸಿಂಗ್, ಶಂಕರ್ ಮೇಟಿ ಇತರರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.