ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಮುರಿಯಲು ಕಾರಣ ಪತ್ತೆಗೆ ತಜ್ಞರ ತಂಡ ಆಗಮನ

Published : 9 ಸೆಪ್ಟೆಂಬರ್ 2024, 9:57 IST
Last Updated : 9 ಸೆಪ್ಟೆಂಬರ್ 2024, 9:57 IST
ಫಾಲೋ ಮಾಡಿ
Comments

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್ ಕಳೆದ ಆಗಸ್ಟ್ 10ರಂದು ರಾತ್ರಿ ನೀರಲ್ಲಿ ಕೊಚ್ಚಿಹೋಗಲು ಕಾರಣ ಏನು ಎಂಬುದನ್ನು ಪತ್ತೆ ಮಾಡಲು ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಮಾಜಿ ಅಧ್ಯಕ್ಷ ಎ.ಕೆ.ಬಜಾಜ್‌ ನೇತೃತ್ವದ ತಾಂತ್ರಿಕ ತಜ್ಞರ ತನಿಖಾ ತಂಡ ಸೋಮವಾರ ಅಣೆಕಟ್ಟೆಗೆ ಬಂದು ವೀಕ್ಷಣೆ ನಡೆಸಿದೆ.

‘ತಂಡದಲ್ಲಿ ಸುಮಾರು ಆರು ಮಂದಿ ಇದ್ದರು. ಕ್ರಸ್ಟ್‌ಗೇಟ್‌ಗಳ ಸಾಮರ್ಥ್ಯದ ಸಹಿತ ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದರು ’ ಎಂದು ತುಂಗಭದ್ರಾ ಅಣೆಕಟ್ಟೆಯ ಮೂಲಗಳು ತಿಳಿಸಿವೆ.

ಚೈನ್‌ ಲಿಂಕ್‌ನ ಬಲದೊಂದಿಗೆ ಲಂಬವಾಗಿ ನಿಂತಿದ್ದ ಕ್ರಸ್ಟ್‌ಗೇಟ್ ಕಳಚಿಕೊಳ್ಳಲು ನಿಜವಾಗಿ ಕಾರಣವೇನು, ಮಳೆಗಾಲಕ್ಕೆ ಮೊದಲು ಮತ್ತು ನಂತರ ಗೇಟ್‌ ಮತ್ತು ಚೈನ್‌ಲಿಂಕ್‌ಗಳನ್ನು ಆಗಾಗ್ಗೆ ಪರೀಕ್ಷಿಸಲಾಗುತ್ತಿತ್ತೇ, ಕ್ರಸ್ಟ್‌ಗೇಟ್‌ಗಳ ಆಯಸ್ಸು, ಕೊನೆಯ ಬಾರಿಗೆ ಮಾಡಿದ ದುರಸ್ತಿ ಮೊದಲಾದ ಅಂಶಗಳನ್ನು ತಂಡ ಕೂಲಂಕಷವಾಗಿ ಪರಿಶೀಲಿಸಲಿದ್ದು, ಮುಂದೆ ಇಂತಹ ದುರಂತ ಸಂಭವಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಲಿದೆ ಎಂದು ಹೇಳಲಾಗಿದೆ.

ಈ ತಂಡಕ್ಕೆ ವರದಿ ಸಲ್ಲಿಸಲು 15 ದಿನಗಳ ಗಡುವು ನೀಡಲಾಗಿದೆ. ಹೀಗಾಗಿ ತಜ್ಞರ ತಂಡ ಕೆಲವೇ ದಿನಗಳಲ್ಲಿ ವರದಿ ಸಲ್ಲಿಸುವ ಸಾಧ್ಯತೆ ಇರುವುದನ್ನು ತುಂಗಭದ್ರಾ ಮಂಡಳಿಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT