ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಂಗಭದ್ರಾ ಜಲಾಶಯ: ನದಿಪಾತ್ರದ ಜನ ಎಚ್ಚರದಿಂದ ಇರಲು ಸೂಚನೆ

Published : 11 ಆಗಸ್ಟ್ 2024, 3:16 IST
Last Updated : 11 ಆಗಸ್ಟ್ 2024, 3:16 IST
ಫಾಲೋ ಮಾಡಿ
Comments

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಮುರಿದು ಹೋಗಿರುವುದರಿಂದ ನದಿಗೆ ಸದ್ಯ 1 ಲಕ್ಷ ಕ್ಯುಸೆಕ್‌ನಷ್ಟು ನೀರನ್ನು ಬಿಡಲಾಗುತ್ತಿದ್ದು, ಆ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರದಿಂದ ಇರಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸೂಚಿಸಿದ್ದಾರೆ.

ಸದ್ಯ ಎಲ್ಲಿಯೂ ಪ್ರವಾಹದ ಸ್ಥಿತಿ ಇಲ್ಲ, ಅಣೆಕಟ್ಟೆಯಿಂದ 2.50 ಲಕ್ಷ ಕ್ಯುಸೆಕ್‌ನಷ್ಟು ನೀರನ್ನು ಹೊರಬಿಟ್ಟರೆ ಮಾತ್ರ ಕೆಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗುವುದು ಈ ಹಿಂದಿನ ಅನುಭವಗಳಿಂದ ತಿಳಿದಿರುವ ಸಂಗತಿಯಾಗಿದ್ದು, ಸದ್ಯ ಪ್ರವಾಹ ಸ್ಥಿತಿ ಇಲ್ಲ ಎಂದು ತಿಳಿಸಿದ್ದಾರೆ.

ಶಾಸಕ ಭೇಟಿ: ವಿಜಯನಗರ ಕ್ಷೇತ್ರದ ಶಾಸಕ ಎಚ್.ಆರ್.ಗವಿಯಪ್ಪ ಅವರು ಭಾನುವಾರ ನಸುಕಿನಲ್ಲೇ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT