ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ; ನದಿಗೆ ನೀರು

Last Updated 19 ನವೆಂಬರ್ 2021, 8:20 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿರುವುದರಿಂದ ಶುಕ್ರವಾರ ಅಣೆಕಟ್ಟೆಯ ಕ್ರಸ್ಟ್‌ಗೇಟ್‌ಗಳನ್ನು ತೆಗೆದು ನದಿಗೆ ನೀರು ಹರಿಸಲಾಗುತ್ತಿದೆ.

ವಾರದಿಂದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಾಗಿದೆ. ಸದ್ಯ ಜಲಾಶಯಕ್ಕೆ 50,000 ಕ್ಯುಸೆಕ್‌ಗೂ ಅಧಿಕ ನೀರು ಹರಿದು ಬರುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ ಸಂಪೂರ್ಣ ತುಂಬಿದೆ. 12 ಕ್ರಸ್ಟ್‌ಗೇಟ್‌ಗಳನ್ನು ಎರಡು ಅಡಿ ಮೇಲಕ್ಕೆತ್ತಿ 36,000 ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಇನ್ನು, ಐದು ಸಾವಿರ ಕ್ಯುಸೆಕ್‌ ನೀರು ಕಾಲುವೆಗಳಿಗೆ ಬಿಡಲಾಗುತ್ತಿದೆ.

‘ಮುಂದಿನ ಎರಡ್ಮೂರು ದಿನಗಳವರೆಗೆ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸತತವಾಗಿ ಒಳಹರಿವು ಕೂಡ ಹೆಚ್ಚಾಗುತ್ತಿದೆ. ಯಾವುದೇ ಸಂದರ್ಭದಲ್ಲಿ ನದಿಗೆ 1 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗುವುದು. ಯಾರೂ ಕೂಡ ನದಿ ಪಾತ್ರದಲ್ಲಿ ಓಡಾಡಬಾರದು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT