ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯಲ್ಲಿ ನಿರೀಕ್ಷಿಸಿದ್ದಕ್ಕಿಂತ ವೇಗವಾಗಿ ಕ್ರೆಸ್ಟ್ಗೇಟ್ ಅಳವಡಿಕೆ ನಡೆಯುತ್ತಿದೆ, ಮೇ ಅಂತ್ಯದ ವೇಳೆಗೆ ಎಲ್ಲಾ 33 ಕ್ರೆಸ್ಟ್ಗೇಟ್ ಹಾಗೂ ಹೊಸ ಚೈನ್ಲಿಂಕ್ ಅಳವಡಿಕೆ ಆಗಲಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ಅವರು ಶುಕ್ರವಾರ ತುಂಗಭದ್ರಾ ಅಣೆಕಟ್ಟೆಗೆ ಭೇಟಿ ನೀಡಿ, ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.

‘ಇದುವರೆಗೆ 18 ಗೇಟ್ಗಳ ಅಳವಡಿಕೆ ಪೂರ್ಣಗೊಂಡಿದೆ. ಈ ತಿಂಗಳೊಳಗೆ 23 ಗೇಟ್ಗಳು ಪೂರ್ಣಗೊಳ್ಳಲಿವೆ. ಉಳಿದ 10 ಗೇಟ್ಗಳಿಗೆ ಮೇ ಅಂತ್ಯದೊಳಗೆ ಗೇಟ್ ಅಳವಡಿಕೆ ಆಗಲಿದೆ. ಜೂನ್ನಿಂದ ಮಳೆ ಬಂದು ಜಲಾಶಯ ಭರ್ತಿಯಾಗಿ ರೈತರಿಗೆ ಈ ಹಿಂದಿನಂತೆಯೇ ನೀರು ಲಭಿಸುವ ನಿರೀಕ್ಷೆ ಇದೆ. ಹೀಗಾಗಿ ಜನರು ಆತಂಕಕ್ಕೆ ಒಳಗಾಗುವ ಅಗತ್ಯವೇ ಇಲ್ಲ’ ಎಂದರು.

ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿ 28 ಟಿಎಂಸಿ ಅಡಿಯಷ್ಟು ನೀರು ನಿಲ್ಲುವ ಸಾಮರ್ಥ್ಯ ಕಡಿಮೆಯಾಗಿದೆ. ಇದಕ್ಕಾಗಿ ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಿಸಲು ಆಂಧ್ರ ಸರ್ಕಾರಕ್ಕೆ ಮೇಲಿಂದ ಮೇಲೆ ಒತ್ತಾಯ ಮಾಡುತ್ತಲೇ ಇದ್ದೇವೆ. ತೆಲಂಗಾಣ ಜತೆಗಿನ ವಿವಾದವೊಂದು ಬಗೆಹರಿದ ಬಳಿಕ ಅಂದರೆ ಇನ್ನೆರಡು ತಿಂಗಳಲ್ಲಿ ಆಂಧ್ರ ಸಿಎಂ ಅವರು ಕರ್ನಾಟಕದ ಜತೆಗೆ ಮಾತುಕತೆಗೆ ಮುಂದಾಗುವ ನಿರೀಕ್ಷೆ ಇದೆ ಎಂದು ಸಚಿವರು ಹೇಳಿದರು.

‘ತುಂಗಭದ್ರಾ ಜಲಾಶಯ, ಕೃಷ್ಣಾ ಸಹಿತ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನಮ್ಮ ರಾಜ್ಯದ ವಿವಿಧ ಚುನಾಯಿತ ಪ್ರತಿನಿಧಿಗಳ ನಿಯೋಗವು ನವದೆಹಲಿಯಲ್ಲಿ ಜಲಶಕ್ತಿ ಸಚಿವಾಲಯದ ಅಧಿಕಾರಿಗಳು ಮತ್ತು ವಿವಿಧ ರಾಜ್ಯಗಳ ಸಂಸದರೊಂದಿಗೆ ಮಹತ್ವದ ಚರ್ಚೆ ನಡೆಸಿದೆ. ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಚುನಾವಣಾ ನೀತಿ ಸಂಹಿತೆ ಕೊನೆಗೊಂಡ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತದೆ. ಬಳಿಕ ಒಂದು ಸ್ಪಷ್ಟ ರೂಪ ಸಿಗುವ ನಿರೀಕ್ಷೆ ಇದೆ’ ಎಂದು ಸಚಿವ ಬೋಸರಾಜು ಹೇಳಿದರು.

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷ ಹಾಗೂ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ, ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ವಿಜಯನಗರ ಜಿಲ್ಲಾ ಎಎಸ್ಪಿ ಜಿ.ಮಂಜುನಾಥ್, ಕೊಪ್ಪಳ ಎಎಸ್ಪಿ ಆರ್.ಹೇಮಂತ್ ಕುಮಾರ್, ತುಂಗಭದ್ರಾ ಮಂಡಳಿ ಮತ್ತು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಾದ ಮುಖ್ಯ ಎಂಜಿನಿಯರ್ ಶ್ರೀನಿವಾಸ ಮಲ್ಲಿಗಿವಾಡ, ಎಇಇ ಧರ್ಮರಾಜ್, ಜ್ಞಾನೇಶ್ವರ, ಸೆಕ್ಷನ್ ಅಧಿಕಾರಿಗಳಾದ ಜಿ. ಕಿರಣ, ಡಿ.ಕೆ. ಪಂಪಾಪತಿ, ಹುಲಿರಾಜ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.