ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಂಗಭದ್ರಾ | ಚೈನ್‌ ಲಿಂಕ್ ಬೆಸುಗೆ ಬಿಟ್ಟದ್ದೇ ಗೇಟ್‌ ಕುಸಿಯಲು ಕಾರಣ: ಮಂಡಳಿ

Published 11 ಆಗಸ್ಟ್ 2024, 4:50 IST
Last Updated 11 ಆಗಸ್ಟ್ 2024, 4:50 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ತುಂಗಭದ್ರಾ ಅಣೆಕಟ್ಟೆಯ 19ನೇ ಸಂಖ್ಯೆಯ ಕ್ರಸ್ಟ್‌ಗೇಟ್‌ನ ಚೈನ್‌ಲಿಂಕ್‌ ಬೆಸುಗೆ (ವೆಲ್ಡಿಂಗ್‌) ಬಿಟ್ಟಿದ್ದೇ ಗೇಟ್ ಸಂಪೂರ್ಣ ಕುಸಿಯಲು ಕಾರಣ, ಅಣೆಕಟ್ಟೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂತಹ ದುರಂತ ಸಂಭವಿಸಿದೆ’ ಎಂದು ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಒ.ಆರ್‌.ಕೆ.ರೆಡ್ಡಿ ಹೇಳಿದರು.

ಟಿ.ಬಿ.ಡ್ಯಾಂ ಅತಿಥಿಗೃಹ ‘ವೈಕುಂಠ’ದಲ್ಲಿ ಭಾನುವಾರ ಬೆಳಿಗ್ಗೆ ಹಿರಿಯ ಅಧಿಕಾರಿಗಳು, ಎಂಜಿನಿಯರ್‌ಗಳ ಜತೆಗೆ ಸಮಾಲೋಚನೆ ನಡೆಸಿದ ಬಳಿಕ ‘ಪ್ರಜಾವಾಣಿ’ ಜತೆಗೆ ಮಾತನಾಡಿದ ಅವರು, ಬದಲಿ ಗೇಟ್‌ ಅಳವಡಿಸಲು ತಕ್ಷಣದಿಂದಲೇ ಸಿದ್ಧತೆ ನಡೆದಿದೆ. ಮಳೆ ಕಡಿಮೆಯಾಗಿರುವ ಕಾರಣ ಮೂರ್ನಾಲ್ಕು ದಿನಗಳಲ್ಲಿ ನೀರು ಖಾಲಿಯಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂದರು.

‘ಸಾಮಾನ್ಯವಾಗಿ ಪ್ರತಿ ವರ್ಷವೂ ಗೇಟ್‌ಗಳ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸುತ್ತಲೇ ಇರುತ್ತೇವೆ. ಈ ಬಾರಿ ಸಹ ಅಂತಹ ಎಲ್ಲಾ ಪರೀಕ್ಷೆಗಳೂ ನಡೆದಿವೆ. ಆದರೆ 19ನೇ ಗೇಟ್‌ನಲ್ಲಿ ವೆಲ್ಡಿಂಗ್ ಬಿಟ್ಟ ಕಾರಣ ಚೈನ್‌ಲಿಂಕ್‌ ತುಂಡಾಯಿತು. 70 ವರ್ಷಗಳ ಹಿಂದೆ ಅಳವಡಿಸಿದ ಚೈನ್‌ ಲಿಂಕ್‌ ಇದು. ಹೀಗಿದ್ದರೂ ಈ ವೆಲ್ಡಿಂಗ್ ಬಿಡಲು ಕಾರಣ ಏನು ಎಂಬುದರ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದೆ’ ಎಂದು ಅವರು ತಿಳಿಸಿದರು.

48 ಟನ್‌ನ ಗೇಟ್‌
‘ಸಂಪೂರ್ಣ ಹೊಸ ಕ್ರಸ್ಟ್‌ಗೇಟ್ ಅನ್ನೇ ಅಳವಡಿಸಬೇಕಿದೆ. 60 ಅಡಿ ಎತ್ತರ ಮತ್ತು 20 ಅಡಿ ಅಗಲದ ಗೇಟ್‌ ಇದಾಗಿರುತ್ತದೆ. ತಲಾ 12 ಅಡಿ ಅಗಲದ 5 ಬೃಹತ್‌ ಕಬ್ಬಿಣದ ಹಲಗೆಗಳನ್ನು ಜೋಡಿಸಿ ಈ ಗೇಟ್‌ ಸಿದ್ಧಪಡಿಸಲಾಗುತ್ತದೆ. ಸ್ಥಳೀಯವಾಗಿಯೇ ಅದನ್ನು ನಿರ್ಮಿಸುಲಾಗುತ್ತಿದೆ. ನೀರು 20 ಅಡಿಯಷ್ಟು ಇಳಿಕೆಯಾದ ತಕ್ಷಣ ಗೇಟ್ ಅಳವಡಿಸಲಾಗುವುದು’ ಎಂದು ರೆಡ್ಡಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT