ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋದ ವರ್ಷಕ್ಕಿಂತ 9 ಅಡಿ ಅಧಿಕ ನೀರು; ತುಂಗಭದ್ರಾ ಅಣೆಕಟ್ಟೆ ಒಳಹರಿವು ಹೆಚ್ಚಳ

Last Updated 16 ಜುಲೈ 2021, 17:05 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕಳೆದ ಎರಡು ದಿನಗಳಿಂದ ಇಲ್ಲಿನ ತುಂಗಭದ್ರಾ ಅಣೆಕಟ್ಟೆಯ ಒಳಹರಿವು ಸತತವಾಗಿ ಏರಿಕೆಯಾಗುತ್ತಿದೆ.

ಶುಕ್ರವಾರ ಜಲಾಶಯದ ಒಳಹರಿವು 11,920 ಕ್ಯುಸೆಕ್‌ ದಾಖಲಾಗಿದೆ. ಗುರುವಾರ 6,717 ಕ್ಯುಸೆಕ್‌, ಬುಧವಾರ 1,114 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು.

1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,611.35 ಅಡಿ ನೀರಿನ ಸಂಗ್ರಹವಿದೆ. ಹೋದ ವರ್ಷ ಇದೇ ದಿನ 1,602.64 ಅಡಿ ನೀರಿನ ಸಂಗ್ರಹವಿತ್ತು. ಅಂದರೆ ಹಿಂದಿನ ವರ್ಷಕ್ಕಿಂತ ಒಂಬತ್ತು ಅಡಿ ನೀರಿನ ಸಂಗ್ರಹ ಹೆಚ್ಚಿದೆ. ಸದ್ಯ 291 ಕ್ಯುಸೆಕ್‌ ನೀರು ಹೊರಬಿಡಲಾಗುತ್ತಿದೆ. ಭಾನುವಾರದಿಂದ (ಜು.18) ಜಲಾಶಯದ ಮೇಲ್ಮಟ್ಟ (ಎಚ್‌ಎಲ್‌ಸಿ), ಕೆಳಮಟ್ಟದ (ಎಲ್‌ಎಲ್‌ಸಿ) ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದೆ.

‘ಮಲೆನಾಡು, ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಒಳಹರಿವು ಎರಡು ದಿನಗಳಿಂದ ಸತತವಾಗಿ ಹೆಚ್ಚಳವಾಗುತ್ತಿದೆ. ಇದೇ ರೀತಿ ಮಳೆಯಾದರೆ ಇನ್ನಷ್ಟು ಹೆಚ್ಚಾಗಬಹುದು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT