ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ

Last Updated 19 ಜೂನ್ 2021, 10:11 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿದೆ.

ಶನಿವಾರ 21,169 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. 233 ಕ್ಯುಸೆಕ್‌ ನೀರು ಕಾಲುವೆಗೆ ಹರಿಸಲಾಗುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,593.19 ಅಡಿ ನೀರಿನ ಸಂಗ್ರಹವಿದೆ. ಶುಕ್ರವಾರ 7,123 ಕ್ಯುಸೆಕ್ ಒಳಹರಿವು ಇತ್ತು.

‘ಕಳೆದ ಕೆಲವು ದಿನಗಳಿಂದ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಈಗಾಗಲೇ ತುಂಗಾ ಜಲಾಶಯ ಭರ್ತಿಯಾಗಿದ್ದು, ನದಿಗೆ ನೀರು ಹರಿಸಲಾಗುತ್ತಿದೆ. ಭದ್ರಾ ಅಣೆಕಟ್ಟೆಯಲ್ಲೂ ನೀರಿನ ಸಂಗ್ರಹ ಹೆಚ್ಚಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಲಾಶಯದ ಒಳಹರಿವು ಹೆಚ್ಚಾಗಿದೆ. ಬರುವ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಎಂಜಿನಿಯರ್‌ ವಿಶ್ವನಾಥ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಶನಿವಾರ ಜಿಟಿಜಿಟಿ ಮಳೆಯಾಗಿದೆ. ‘ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯಲ್ಲಿ ಎರಡ್ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT