ಸೋಮವಾರ, ಆಗಸ್ಟ್ 2, 2021
19 °C

24 ಗಂಟೆಗಳಲ್ಲಿ ನಾಲ್ಕು ಟಿಎಂಸಿ ನೀರು ಸಂಗ್ರಹ: ಹೆಚ್ಚಿದ ತುಂಗಭದ್ರಾ ಒಳಹರಿವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಸತತ ಹೆಚ್ಚುತ್ತಲೇ ಇದೆ.

ಕಳೆದ 24 ಗಂಟೆಗಳಲ್ಲಿ ಅಣೆಕಟ್ಟೆಗೆ ನಾಲ್ಕು ಟಿಎಂಸಿ ಅಡಿಗೂ ಅಧಿಕ ನೀರು ಹರಿದು ಬಂದಿದೆ. ಮಲೆನಾಡು ಹಾಗೂ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಒಳಹರಿವು ನಿರಂತರವಾಗಿ ಹೆಚ್ಚುತ್ತಿದೆ.

ಸದ್ಯ 42,748 ಕ್ಯುಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಶನಿವಾರ 21,169 ಕ್ಯುಸೆಕ್‌ ಒಳಹರಿವು ಇತ್ತು. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,596.94 ಅಡಿ ನೀರಿನ ಸಂಗ್ರಹವಿದೆ. 242 ಕ್ಯುಸೆಕ್‌ ನೀರು ಕಾಲುವೆಗೆ ಹರಿಸಲಾಗುತ್ತಿದೆ.

ತಗ್ಗಿದ ಮಳೆ: ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಶನಿವಾರದಿಂದ ಮಳೆ ಬಿಡುವು ಕೊಟ್ಟಿದೆ. ನಾಲ್ಕೈದು ದಿನಗಳಿಂದ ಜಿಲ್ಲೆಯಾದ್ಯಂತ ಆಗಾಗ ಮಳೆಯಾಗುತ್ತಿತ್ತು. ಆದರೆ, ಶನಿವಾರದಿಂದ ಭಾನುವಾರದ ವರೆಗೆ ಮಳೆಯಾಗಿಲ್ಲ. ಭಾನುವಾರ ಕಾರ್ಮೋಡ ಸರಿದು ಬಿಸಿಲು ಕಾಣಿಸಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು