ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಂಗಭದ್ರಾ ಅಣೆಕಟ್ಟೆ ಭರ್ತಿಗೆ 1.94 ಅಡಿ ಬಾಕಿ

ಯಾವುದೇ ಕ್ಷಣದಲ್ಲಿ ಕ್ರಸ್ಟ್‌ಗೇಟ್‌ ತೆರೆದು ನೀರು ಹೊರಬಿಡುವ ಸಾಧ್ಯತೆ
Published : 2 ಸೆಪ್ಟೆಂಬರ್ 2024, 16:11 IST
Last Updated : 2 ಸೆಪ್ಟೆಂಬರ್ 2024, 16:11 IST
ಫಾಲೋ ಮಾಡಿ
Comments

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆ ಭರ್ತಿಯಾಗಲು 1.94 ಅಡಿ ಬಾಕಿ ಉಳಿದಿದ್ದು,  ಜಲಾಶಯದಲ್ಲಿ 98.10 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಅಣೆಕಟ್ಟೆಯ ಗರಿಷ್ಠ ಮಟ್ಟ 1,633 ಅಡಿ ಅಗಿದ್ದು, ಸೋಮವಾರ ಬೆಳಿಗ್ಗೆ 1,631.06 ಅಡಿ ನೀರಿನ ಮಟ್ಟ ಇತ್ತು. 105.78 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯ ಭರ್ತಿಗೆ ಇನ್ನು 7 ಟಿಎಂಸಿ ಅಡಿ ನೀರು ಬೇಕಿದೆ. ಒಳಹರಿವಿನ ಪ್ರಮಾಣ ಸರಾಸರಿ 26,272 ಕ್ಯುಸೆಕ್‌ ಇದೆ. ಹೊರ ಹರಿವಿನ ಪ್ರಮಾಣ 15,237 ಕ್ಯುಸೆಕ್‌ ಇದೆ. 

‘ಸದ್ಯದ ಸ್ಥಿತಿಯಲ್ಲೇ ಒಳಹರಿವಿನ ಪ್ರಮಾಣ ಇದ್ದರೆ ತಕ್ಷಣಕ್ಕೆ ಕ್ರಸ್ಟ್‌ಗೇಟ್ ತೆರೆಯುವ ಅಗತ್ಯ ಇಲ್ಲ. ಆದರೆ ಒಳಹರಿವಿನ ಪ್ರಮಾಣ 40 ಸಾವಿರ ಕ್ಯುಸೆಕ್‌ಗಿಂತ ಹೆಚ್ಚಾದರೆ ಕ್ರಸ್ಟ್‌ಗೇಟ್ ತೆರೆದು, ನೀರು ನದಿಗೆ ಹರಿಸುವುದು ಅನಿವಾರ್ಯ ಆಗಬಹುದು. ನದಿತೀರದ ಜನರು ಎಚ್ಚರಿಕೆಯಿಂದ ಇರಬೇಕು’ ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ.

ನೀರು ಹೊರಕ್ಕೆ: ಎರಡು ದಿನಗಳಿಂದ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳಲು ಕ್ರಸ್ಟ್‌ ಗೇಟ್ ತೆರೆಯದೆ, ಅಧಿಕ ಜಲವಿದ್ಯುತ್ ಉತ್ಪಾದನೆ ಮಾಡುವ ಮೂಲಕ 5 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಧಿಕ ನೀರು ಹೊರಬಿಡುವ ಸಂದರ್ಭ ಎದುರಾದಾಗ ಕ್ರಸ್ಟ್‌ಗೇಟ್‌ ತೆರೆಯುವುದು ಅನಿವಾರ್ಯವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT