ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಹರಿವು ಭಾರಿ ಹೆಚ್ಚಳ

Last Updated 30 ಏಪ್ರಿಲ್ 2021, 7:50 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಸತತ ಹೆಚ್ಚಾಗುತ್ತಲೇ ಇದೆ.

ಶುಕ್ರವಾರ 2,229 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಗುರುವಾರ 1,450 ಕ್ಯುಸೆಕ್‌ ಒಳಹರಿವು ಇತ್ತು. 1633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,577.88 ಅಡಿ ನೀರಿನ ಸಂಗ್ರಹವಿದೆ.

ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸತತವಾಗಿ ಒಳಹರಿವು ಹೆಚ್ಚಾಗುತ್ತಿದೆ. ಇನ್ನೂ ಕೆಲವು ದಿನ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿರುವುದರಿಂದ ಒಳಹರಿವು ಇನ್ನಷ್ಟು ಹೆಚ್ಚಾಗಬಹುದು ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT