ಹೊಸಪೇಟೆ (ವಿಜಯನಗರ): ನಗರದ ಮ್ಯಾಸಕೇರಿ ಸಮೀಪ ಗಾಂಜಾ ಮಾರುತ್ತಿದ್ದ ಇಬ್ಬರು ಮಹಿಳೆಯರನ್ನು ಮಂಗಳವಾರ ವಶಕ್ಕೆ ಪಡೆದಿರುವ ಪಟ್ಟಣ ಠಾಣೆ ಪೊಲೀಸರು ಅವರಿಂದ 2.15 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ನಗರದ ಮ್ಯಾಸಕೇರಿ ನಿವಾಸಿ ಹೇಮಲತಾ (42), ತಾಲ್ಲೂಕಿನ ಡಣಾಪುರ ಗ್ರಾಮದ ಕಲಾವತಿ ಐತಾಳ್ (36) ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ಚಿತ್ತವಾಡ್ಗಿ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ಜಯಪ್ರಕಾಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಾನ್‌ಸ್ಟೆಬಲ್‌ಗಳಾದ ರಾಜಶೇಖರ, ಮಲ್ಲೇಶಪ್ಪ, ನಾಗರಾಜ, ಶ್ರೀನಿವಾಸ, ರಾಘವೇಂದ್ರ, ಲಿಂಗರಾಜ, ಉಮಾ, ದುರ್ಗಿಬಾಯಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.