ಭಾನುವಾರ, ಏಪ್ರಿಲ್ 11, 2021
27 °C

ಕಾಲುವೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ನಗರದ ಚಿತ್ತವಾಡ್ಗಿ ಹೊಸೂರು ರಸ್ತೆಯ ರಾಯ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

‌ಇಲ್ಲಿನ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತ ಸಮೀಪ ವಾಸಿಸುತ್ತಿದ್ದ ಯುವರಾಜ (11) ಮತ್ತು ವೇಣು (10) ಮೃತರು. ‘ಆ ಪ್ರದೇಶd ಅನೇಕ ಬಾಲಕರು ಆಗಾಗ ಕಾಲುವೆಗೆ ಈಜಾಡಲು ಹೋಗುತ್ತಾರೆ. ಬುಧವಾರ ಸಂಜೆ ಅದೇ ಬಡಾವಣೆಯ ಯುವರಾಜ, ವೇಣು ಎನ್ನುವವರು ಈಜಾಡಲು ‌ಹೋಗಿದ್ದರು. ಆದರೆ, ತೀರ ಆಳಕ್ಕೆ ಹೋಗಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಗುರುವಾರ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಕುಟುಂಬದವರಿಗೆ ಒಪ್ಪಿಸಲಾಗಿದೆ’ ಎಂದು ಗ್ರಾಮೀಣ ಠಾಣೆ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು