ಗುರುವಾರ , ಮಾರ್ಚ್ 30, 2023
32 °C

ಹಣಕ್ಕೆ ಬೇಡಿಕೆ: ಇಬ್ಬರು ಕಾನ್‌ಸ್ಟೆಬಲ್ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಹಣಕ್ಕೆ ಬೇಡಿಕೆ ಇಟ್ಟಿದ್ದ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಕಾನ್ ಸ್ಟೆಬಲ್ ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದರು

ಕಾನ್‌ಸ್ಟೆಬಲ್‌ಗಳಾದ ಮಂಜುನಾಥ, ಶರಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಕೂಡ್ಲಿಗಿಯ ಈಡಿಗರ ಸಂತೋಷ ಎಂಬುವರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಸಂತೋಷ ಅವರು ಆಡಿಯೊ ಸಮೇತ ದೂರು ಕೊಟ್ಟಿದ್ದಾರೆ. ಈ ಸಂಬಂಧ ಚಿತ್ತವಾಡ್ಗಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿದೆ' ಎಂದು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು. 

'ಹಣ ಕೊಡದಿದ್ದರೆ ಮಟ್ಕಾ ಆಡುವವರನ್ನು ಬಂಧಿಸಲಾಗುವುದು ಎಂದು ಮಂಜುನಾಥ, ಶರಣಪ್ಪ ಅವರು ಸಂತೋಷ ಅವರಿಗೆ ಹೆದರಿಸಿ ಹಣದ ಬೇಡಿಕೆ ಇಟ್ಟಿದ್ದರು. ಈ ಕುರಿತು ತನಿಖೆ ನಡೆಸಲಾಗುತ್ತಿದೆ' ಎಂದು ತಿಳಿಸಿದರು.

ಸುಲಿಗೆ: ತನಿಖೆಗೆ ಮೂರು ತಂಡ:
ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದ ಸುಲಿಗೆ ಪ್ರಕರಣದ ತನಿಖೆಗೆ ಕೂಡ್ಲಿಗಿ ಡಿವೈಎಸ್ಪಿ ನೇತೃತ್ವದಲ್ಲಿ ಕೊಟ್ಟೂರು, ಕೂಡ್ಲಿಗಿ, ಸಂಡೂರು ಠಾಣೆಯ ಇನ್ ಸ್ಪೆಕ್ಟರ್ ಅವರನ್ನು ಒಳಗೊಂಡ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಕೊಪ್ಪಳ ಜಿಲ್ಲೆಯ ಕನಕಗಿರಿಯ ಕಾಸಿಂ ಮಿಯಾ ಎಂಬ ಹಣ್ಣಿನ ವ್ಯಾಪಾರಿ ಮಂಗಳೂರಿನಿಂದ ಕೊಪ್ಪಳಕ್ಕೆ ಹೋಗುತ್ತಿದ್ದರು. ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಮರಿಯಮ್ಮನಹಳ್ಳಿ ಬಳಿಯ ಜೈ ಹಿಂದ್ ಧಾಬಾ ಬಳಿ ವಾಹನ ನಿಲ್ಲಿಸಿ ನಿದ್ರೆಗೆ ಜಾರಿದ್ದಾರೆ. ಈ ವೇಳೆ ನಾಲ್ವರು ಬಂದು, ಅವರಿದ್ದ ವಾಹನದ ಗಾಜು ಒಡೆದು ಹೆದರಿಸಿ ಅವರ ಬಳಿಯಿದ್ದ  ₹67000  ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.