ಸೋಮವಾರ, ಮೇ 17, 2021
28 °C

ವಿಜಯನಗರ: ಎರಡು ಚಿರತೆ ಪ್ರತ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರ ಸಮೀಪದ ಪವರ್‌ ಹೌಸ್‌ (ಎಚ್‌ಪಿಸಿ) ಸಮೀಪ ಶುಕ್ರವಾರ ಎರಡು ಚಿರತೆಗಳು ಪ್ರತ್ಯಕ್ಷವಾಗಿವೆ.

ಫೋರ್‌ ಬೇ ಕೆನಾಲ್‌ಗೆ ಹೋಗುವ ಮಾರ್ಗ ಮಧ್ಯದಲ್ಲಿ ಎರಡು ಚಿರತೆಗಳು ಶುಕ್ರವಾರ ಬೆಳಗಿನ ಜಾವ ಪ್ರತ್ಯಕ್ಷವಾಗಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮಸ್ಥರು ಚಿರತೆಗಳು ಓಡಾಡುವ ದೃಶ್ಯ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದು ಜನರಲ್ಲಿ ಆತಂಕ ಹೆಚ್ಚಾಗಲು ಕಾರಣವಾಗಿದೆ. ಇದೇ ಭಾಗದಲ್ಲಿ ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆಯವರು ಬೋನು ಇರಿಸಿ ಚಿರತೆಯೊಂದನ್ನು ಸೆರೆ ಹಿಡಿದಿದ್ದರು.

ಗುಡ್ಡಕ್ಕೆ ಬೆಂಕಿ: ಸಂಡೂರು ರಸ್ತೆಯ ಕಾಯ್ದಿಟ್ಟ ಅರಣ್ಯ ಪ್ರದೇಶದ ಅಂಜಿನಮ್ಮನ ಬಗಡಿ ಗುಡ್ಡದಲ್ಲಿ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಅಪಾರ ಗಿಡ, ಮರಗಳು ಸುಟ್ಟು ಕರಕಲಾಗಿವೆ. ‘ಗುಡ್ಡದಲ್ಲಿ ಹುಲ್ಲು, ಗಿಡ, ಮರಗಳು ಒಣಗಿ ಹೋಗಿವೆ. ಕೆಂಡದಂತಹ ಬಿಸಿಲಿಗೆ ಬೆಂಕಿ ಹೊತ್ತಿಕೊಂಡಿರಬಹುದು. ವಿಷಯ ತಿಳಿದು, ಬೆಂಕಿ ಬೇರೆಡೆ ವ್ಯಾಪಿಸಿಕೊಳ್ಳದಂತೆ ತಡೆಯಲಾಗಿದೆ’ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.