ಬುಧವಾರ, ಮೇ 18, 2022
27 °C

ಹೊಸಪೇಟೆ: ಮಾನವೀಯತೆ ಮೆರೆದ ಸಚಿವೆ ಶೋಭಾ ಕರಂದ್ಲಾಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ತಾಲ್ಲೂಕಿನ ಪಾಪಿನಾಯಕನಹಳ್ಳಿ ಬಳಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿ ಅವರನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಕಳಿಸಿ, ತಾವು ಬೈಕ್‌ ಮೇಲೆ ನಿರ್ಗಮಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಾನವೀಯತೆ ತೋರಿದ್ದಾರೆ.

ನಗರದಲ್ಲಿ ಏರ್ಪಡಿಸಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಶೋಭಾ ಅವರು ರಸ್ತೆ ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಚಾಲಕರಿಬ್ಬರೂ ಗಾಯಗೊಂಡಿದ್ದರು. ಈ ವೇಳೆ ಕಾರು ನಿಲ್ಲಿಸಿ, ಕೆಳಗಿಳಿದ ಶೋಭಾ ಅವರು, ಗಾಯಗೊಂಡ ಚಾಲಕರನ್ನು ಕಂಡು, ತಕ್ಷಣವೇ ಅವರ ಕಾರಿನಲ್ಲಿ ಇಬ್ಬರನ್ನು ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಿದರು.

ನಂತರ ಸ್ಥಳೀಯ ಯುವಕರೊಬ್ಬರ ಬೈಕಿನಲ್ಲಿ ನಗರಕ್ಕೆ ಬಂದರು. ಇದನ್ನು ನೋಡಿ ಸ್ಥಳೀಯರು ಶೋಭಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು