ಹೊಸಪೇಟೆ: ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅ.7ರಂದು ಬೆಳಿಗ್ಗೆ 10ಕ್ಕೆ ನಗರದ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಪ್ರಸ್ತಾವ ವಿರೋಧಿಸಿರುವ ಸ್ಥಳೀಯ ವಾಲ್ಮೀಕಿ ನಾಯಕ ಸಮುದಾಯದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೋ, ಇಲ್ಲವೋ ಎಂಬ ಕುತೂಹಲ ನೆಲೆಸಿದೆ.

ಈಗಾಗಲೇ ಸಮುದಾಯದ ಮುಖಂಡರು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಿದ್ದು, ಅ.5ರ ಗಡುವು ನೀಡಿದ್ದಾರೆ. ಅಷ್ಟರೊಳಗೆ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಅನುಸಾರ ತಾವೂ ನಿರ್ಧಾರ ಕೈಗೊಳ್ಳುವುದಾಗಿ ಈಗಾಗಲೇ ತಿಳಿಸಿದ್ದಾರೆ. ಸದ್ಯ ಚೆಂಡು ಸರ್ಕಾರದ ಅಂಗಳದಲ್ಲಿದೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಾಧ್ಯಾಪಕರು ಮತ್ತು ಸದಸ್ಯ ಸಿ.ಬಿ. ಚಿಲ್ಕರಾಗಿ ಅವರು ಅಂದು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾಮಟ್ಟದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜಡಗ ಮತ್ತು ಬಾಲ ಯೋಜನೆಯಡಿ ₹1 ಲಕ್ಷದ ಪ್ರೋತ್ಸಾಹಧನ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.