ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಗೆ ಹಂಪಿ ಸಿದ್ಧ

Last Updated 21 ಆಗಸ್ಟ್ 2021, 4:30 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡುವರು. ಅವರ ಭೇಟಿ ಹಿನ್ನೆಲೆಯಲ್ಲಿ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇವಸ್ಥಾನದಲ್ಲಿ ಕೆಂಪು ನೆಲಹಾಸು ಹಾಕಲಾಗಿದೆ.

ವಿರೂಪಾಕ್ಷೇಶ್ವರ ದೇಗುಲದಲ್ಲಿ ಪೂಜೆ ನೆರವೇರಿಸುವ ಅವರು, ಕೃಷ್ಣ ದೇವಸ್ಥಾನ, ಕಡಲೆಕಾಳು, ಸಾಸಿವೆಕಾಳು, ಕಮಲ ಮಹಲ್, ಮಹಾನವಮಿ ದಿಬ್ಬ, ವಿಜಯ ವಿಠಲ ದೇವಸ್ಥಾನಕ್ಕೆ ತೆರಳಿ ಕಲ್ಲಿನ ರಥ, ಸಪ್ತಸ್ವರ ಮಂಟಪ ವೀಕ್ಷಿಸುವರು.

ಕೊರೊನಾ ಹರಡುವುದನ್ನು ತಡೆಯಲು ವಾರಾಂತ್ಯದಲ್ಲಿ ಹಂಪಿ ವೀಕ್ಷಣೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ವೆಂಕಯ್ಯ ನಾಯ್ಡು ಭೇಟಿ ಪ್ರಯುಕ್ತ ಹಂಪಿಯಲ್ಲಿ ಇನ್ನಷ್ಟು ಭದ್ರತೆ ಹೆಚ್ಚಿಸಲಾಗಿದೆ.

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಭೇಟಿ ಹಿನ್ನೆಲೆಯಲ್ಲಿ ವಿಜಯ ವಿಠಲ ದೇಗುಲದಲ್ಲಿ ಕೆಂಪು ನೆಲಹಾಸು ಹಾಕಲಾಗಿದೆ.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಭೇಟಿ ಹಿನ್ನೆಲೆಯಲ್ಲಿ ವಿಜಯ ವಿಠಲ ದೇಗುಲದಲ್ಲಿ ಕೆಂಪು ನೆಲಹಾಸು ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT