ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 20ರಂದು ವಿಜಯನಗರ ಜಿಲ್ಲೆ ಬಂದ್‌: ಪ. ಜಾತಿ/ಪ. ಪಂಗಡ ಹೋರಾಟ ಸಮಿತಿ

Last Updated 25 ಏಪ್ರಿಲ್ 2022, 13:16 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಆಗ್ರಹಿಸಿ ಮೇ 20ರಂದು ವಿಜಯನಗರ ಜಿಲ್ಲೆ ಬಂದ್‌ ಮಾಡಲು ನಿರ್ಧರಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಮುಖಂಡ ಬಿ.ಎಸ್‌. ಜಂಬಯ್ಯ ನಾಯಕ ತಿಳಿಸಿದರು.

ಹರಿಹರದ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು 75 ದಿನಗಳಿಂದ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದಾರೆ. ಇತ್ತೀಚೆಗೆ ನಗರದಲ್ಲಿ ಒಂದು ವಾರ ನಿರಂತರ ಧರಣಿ ನಡೆಸಲಾಗಿತ್ತು. ಹೀಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆದಕಾರಣ ಬಂದ್‌ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ಇತ್ತೀಚೆಗೆ ನಗರದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧರಣಿ ಸ್ಥಳಕ್ಕೆ ಬಂದು ನಮ್ಮ ಮನವಿ ಆಲಿಸಲಿಲ್ಲ. ನಮ್ಮನ್ನು ಮತ ಬ್ಯಾಂಕ್‌ ಆಗಿ ಬಳಸಿಕೊಳ್ಳಲಾಗುತ್ತಿದೆ ವಿನಃ ಸೌಕರ್ಯ ಕಲ್ಪಿಸಲು ಹಿಂದೇಟು ಹಾಕಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮುಖಂಡ ನರಸಿಂಹ ನಾಯಕ ಮಾತನಾಡಿ, ಮೀಸಲಾತಿ ಸಂಬಂಧ ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಲು ತೀರ್ಮಾನಿಸಲಾಗಿದೆ. ಮೇ 10ರಿಂದ 20ರ ವರೆಗೆ ರಸ್ತೆ ತಡೆ, ರೈಲು ತಡೆ ಸೇರಿದಂತೆ ಇತರೆ ಚಳವಳಿ ನಡೆಸಲಾಗುವುದು. ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಸಮುದಾಯದ ಜನರಲ್ಲಿ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಈ ಹಿಂದೆ, ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಮೀಸಲಾತಿ ಹೆಚ್ಚಿಸುವ ಭರವಸೆ ನೀಡಲಾಗಿತ್ತು. ಸರ್ಕಾರದ ಅವಧಿ ಮುಗಿಯುತ್ತ ಬಂದರೂ ಸ್ಪಂದಿಸಿಲ್ಲ. ಸಮುದಾಯದ ಜನರೆಲ್ಲ ಒಗ್ಗಟ್ಟಿನಿಂದ ನಮ್ಮ ಹಕ್ಕಿಗಾಗಿ ಹೋರಾಟ ತೀವ್ರಗೊಳಿಸುವುದು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ಮುಖಂಡರಾದ ಸಿಂಗಪುರ ವೆಂಕಟೇಶ, ಶ್ರೀನಿವಾಸ, ನಾನಿಕೇರಿ ತಿಮ್ಮಯ್ಯ, ಮರಡಿ ಜಂಬಯ್ಯ ನಾಯಕ, ಎಲ್.ಜಿ.ಹೊನ್ನಪ್ಪ, ವೆಂಕಟರಮಣ, ಎಂ.ಸಿ.ವೀರಸ್ವಾಮಿ, ನಾಗರತ್ನಮ್ಮ, ಸೋಮಶೇಖರ ಬಣ್ಣದಮನೆ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT