ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ| ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಶೇ 98ರಷ್ಟು ವಿದ್ಯಾರ್ಥಿಗಳು

Last Updated 31 ಮಾರ್ಚ್ 2023, 9:41 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸುಗಮವಾಗಿ ನಡೆದವು. ಪ್ರಥಮ ಭಾಷೆ ಪರೀಕ್ಷೆಗೆ ಶೇ 98ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು.

ನಗರ ಸೇರಿದಂತೆ ಜಿಲ್ಲೆಯ ಒಟ್ಟು 73 ಪರೀಕ್ಷಾ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿದ್ದ ಒಟ್ಟು 20,681 ಜನ ವಿದ್ಯಾರ್ಥಿಗಳ ಪೈಕಿ 20,309 ಜನ ಪರೀಕ್ಷೆಗೆ ಹಾಜರಾಗಿದ್ದರು. 372 ಜನ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಡಿಡಿಪಿಐ ಜಿ. ಕೊಟ್ರೇಶ್ ತಿಳಿಸಿದರು.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷಿಸಿದರು. ಕೇಂದ್ರಗಳ ಹೊರಭಾಗದಲ್ಲಿ ಪ್ರವೇಶ ಪತ್ರ ಪರಿಶೀಲಿಸಿ ವಿದ್ಯಾರ್ಥಿಗಳನ್ನು ಕೊಠಡಿಯೊಳಗೆ ಕಳುಹಿಸಿದರು. ಪರೀಕ್ಷಾ ಕೇಂದ್ರಗಳ 200 ಮೀ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಸದಾಶಿವ ಪ್ರಭು ಅವರು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT