ಬುಧವಾರ, ಜೂನ್ 29, 2022
26 °C

ವಿಜಯನಗರ ಜಿಲ್ಲೆಯಾದ್ಯಂತ ಶಾಲೆಗಳು ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಜಿಲ್ಲೆಯಾದ್ಯಂತ ಸೋಮವಾರ ಶಾಲೆಗಳು ಪುನರಾರಂಭಗೊಂಡಿವೆ.

ಶಾಲೆ ಆರಂಭೋತ್ಸವ ನಿಮಿತ್ತ ಎಲ್ಲ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗಿದ್ದು, ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳ ಮೇಲೆ ಹೂಮಳೆ ಗರೆದು ಶಾಲೆಯ ಶಿಕ್ಷಕರು, ಸಿಬ್ಬಂದಿ ಸ್ವಾಗತಿಸಿದರು.

ಶಾಲಾ ಆವರಣದಲ್ಲಿ ಸರಸ್ವತಿ ಮೂರ್ತಿಗೆ ಪೂಜೆ ಸಲ್ಲಿಸಿ, ನಾಡಗೀತೆ ಹಾಡಿದರು. ಮಕ್ಕಳಿಗೆ ಗುಲಾಬಿ ಹೂ, ಬಿಸ್ಕತ್ ನೀಡಲಾಯಿತು. ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳುಸಸಿಗೆ ನೀರೆರೆದು ಶ್ರಮದಾನ ಮಾಡಿದರು.

ಬುಕ್ ಬ್ಯಾಂಕ್ ನಲ್ಲಿ ಸಂಗ್ರಹಿಸಿ ಇಡಲಾಗಿದ್ದ ಹಳೆಯ ಪುಸ್ತಕಗಳನ್ನು ವಿತರಿಸಲಾಯಿತು. ಮೊದಲ ದಿನವೇ  ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಬಂದದ್ದು ವಿಶೇಷ. ಅವಳಿ ಜಿಲ್ಲೆಗಳಾದ ವಿಜಯನಗರ, ಬಳ್ಳಾರಿಯಲ್ಲಿ ಕೆಂಡದಂತಹ ಬಿಸಿಲು ಇದ್ದು, ಜೂನ್ ನಲ್ಲಿ ಶಾಲೆ ಆರಂಭಿಸಬೇಕು ಎಂಬ ಹಕ್ಕೊತ್ತಾಯವನ್ನು ಹಲವು ಸಂಘಟನೆಗಳು ಮಾಡಿದ್ದವು. ಆದರೆ, ಜಿಲ್ಲಾಡಳಿತ ಅದನ್ನು ಪರಿಗಣಿಸಿಲ್ಲ. ರಾಜ್ಯದ ಇತರೆ ಕಡೆಗಳಂತೆ ಜಿಲ್ಲೆಯಲ್ಲೂ ಶಾಲೆಗಳನ್ನು ಪ್ರಾರಂಭಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.