ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.21ಕ್ಕೆ ಹೊಸಪೇಟೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

Last Updated 14 ಜನವರಿ 2022, 10:43 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜ. 21ರಂದು ಚುನಾವಣೆ ನಿಗದಿಪಡಿಸಲಾಗಿದೆ.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದರೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಜ. 21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ನಾಮಪತ್ರ ಸಲ್ಲಿಸಬಹುದು. ಮಧ್ಯಾಹ್ನ 1ರಿಂದ 1.30ರ ವರೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 1.30ರಿಂದ 2ರ ವರೆಗೆ ಉಮೇದುವಾರಿಕೆ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 2.10ಕ್ಕೆ ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸುವರು ಎಂದು ಉಪವಿಭಾಗಾಧಿಕಾರಿ ಸಿದ್ರಾಮೇಶ್ವರ ತಿಳಿಸಿದ್ದಾರೆ.

ಒಟ್ಟು 35 ಸದಸ್ಯ ಬಲದ ನಗರಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ನ 12, ಪಕ್ಷೇತರರು 12 ಸ್ಥಾನ, ಬಿಜೆಪಿ 10, ಎಎಪಿಯ ಒಬ್ಬ ಸದಸ್ಯರು ಜಯಶಾಲಿಯಾಗಿದ್ದರು. ಬಳಿಕ ನಡೆದ ಬೆಳವಣಿಗೆಯಲ್ಲಿ ಒಂಬತ್ತು ಜನ ಪಕ್ಷೇತರರು, ಎಎಪಿಯ ಒಬ್ಬ ಸದಸ್ಯರು ಬಿಜೆಪಿ ಸೇರಿದ್ದಾರೆ. ಇದರೊಂದಿಗೆ ಬಿಜೆಪಿಯ ಬಲ 20ಕ್ಕೆ ಹೆಚ್ಚಿದೆ. ಆ ಪಕ್ಷದವರೇ ಅಧ್ಯಕ್ಷ, ಉಪಾಧ್ಯಕ್ಷರಾಗುವುದು ಖಚಿತವಾದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT