ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ನಿಂಬಳಗೇರೆಯ ಕಣವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ಮೇವು ಭಸ್ಮವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಗ್ರಾಮದ ತೋಟದ ಬಸವರಾಜ ಎಂಬುವವರಿಗೆ ಸೇರಿದ ಕಣಕ್ಕೆ ಬೆಂಕಿ ತಗುಲಿದ್ದು, 2 ಲೋಡ್ ಶೇಂಗಾ ಹುಲ್ಲು, 1 ಲೋಡ್ ರಾಗಿ ಹುಲ್ಲು, 4 ಲೋಡ್ ಮೆಕ್ಕೆಜೋಳ ಸೊಪ್ಪೆಯ ಬಣವೆಗಳು ಬೆಂಕಿಗೆ ಅಹುತಿಯಾಗಿವೆ.
ಬೆಂಕಿ ಹೊತ್ತಿದ್ದ ಕೂಡಲೇ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಆದರೆ, ನಿಯಂತ್ರಣಕ್ಕೆ ಬರಲಿಲ್ಲ. ಅನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರ ನೆರವಿನಿಂದ ಬೆಂಕಿ ನಂದಿಸಿದರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.