ಹೊಸಪೇಟೆ (ವಿಜಯನಗರ): ಹಂಪಿ ಕನ್ನಡ ವಿಶ್ವವಿದ್ಯಾಲಯವು ಹಸ್ತಪ್ರತಿಗಳ ಡಿಜಿಟಲೀಕರಣಕ್ಕೆ ಸಂಬಂಧಿಸಿದಂತೆ ಕಾರ್ಯವನ್ನು ಈಗಾಗಲೇ ಆರಂಭಿಸಿದ್ದು, ದೇಶದಲ್ಲೇ ಮೊಟ್ಟಮೊದಲ ಸಮಗ್ರ ಡಿಜಿಟಲೀಕರಣ ಕಾರ್ಯವು ಈ ಕೆಲಸದ ಮೂಲಕ ಜಿಲ್ಲೆಯಲ್ಲಿ ನಡೆಯುತ್ತದೆ ಎನ್ನುವ ಆಶಯವಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ಅವರು ಸೋಮವಾರ ಕ್ಯಾಂಪಸ್ನಲ್ಲಿ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗ, ಕೇಂದ್ರದ ಸಂಸ್ಕೃತಿ ಇಲಾಖೆ, ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ‘ಜ್ಞಾನ ಭಾರತಂ ಮಿಷನ್’ ಅಡಿಯಲ್ಲಿ ‘ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ ಹಾಗೂ ಡಿಜಿಟಲೀಕರಣ ವಿಜಯನಗರ ಜಿಲ್ಲೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಸ್ತಪ್ರತಿಗಳಿರುವ ಮನೆಗಳಿಗೆ ತೆರಳಿ, ಕುಟುಂಬದವರ ಮನವೊಲಿಸಿ ಅವುಗಳನ್ನು ಸಂಗ್ರಹಿಸುವ ಕಾರ್ಯ ಅತ್ಯಂತ ಸವಾಲಿನದ್ದಾಗಿದೆ. ಇಂತಹ ಅಮೂಲ್ಯ ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ. ಕನ್ನಡ ವಿಶ್ವವಿದ್ಯಾಲಯವು ಇಂಥ ಸಾಧನೆಯನ್ನು ಮಾಡಿದೆ. ಇಲ್ಲಿನ ಅನೇಕರು ತಮ್ಮ ಕುಟುಂಬ ಮತ್ತು ವೈಯಕ್ತಿಕ ಬದುಕಿನ ಅನೇಕ ಸಂದರ್ಭಗಳನ್ನು ತ್ಯಜಿಸಿ ಈ ಅಮೂಲ್ಯ ಹಸ್ತಪ್ರತಿಗಳನ್ನು ಸಂಗ್ರಹಿಸಿ, ಸಂರಕ್ಷಿಸುವ ಕೆಲಸವನ್ನು ಮಾಡಿದ್ದಾರೆ ಎಂದರು.

ಕುಲಪತಿ ಪ್ರೊ.ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ಹಿಂದೆ ಹಸ್ತಪ್ರತಿಗಳನ್ನು ಓದುವುದು ಅಷ್ಟು ಸುಲಭವಾಗಿರಲಿಲ್ಲ, ಆದರೆ ಇಂದು ಬೆಳೆದಿರುವ ತಂತ್ರಜ್ಞಾನದಿಂದ ಅವುಗಳನ್ನು ಸುಲಭವಾಗಿ ಓದಿ ಅಧ್ಯಯನ ಮಾಡುವ ಅವಕಾಶ ದೊರಕಿದೆ ಎಂದರು.

ಹಳೆಯ ಲಿಪಿಯಲ್ಲಿ ನಮಗೆ ಗೊತ್ತಿಲ್ಲದೆ ಇರುವ ವಿಷಯವಿದೆ ಎನ್ನುವ ನಂಬಿಕೆ ನಮ್ಮಲ್ಲಿದೆ, ಅವುಗಳನ್ನು ಓದಿ ಅಧ್ಯಯನ ಮಾಡಿದಾಗ ಮಾತ್ರ ಅದರೊಳಗಿನ ಜ್ಞಾನ ಮತ್ತು ಮಾಹಿತಿಯ ಅರಿವು ಸಾಧ್ಯವಾಗುತ್ತದೆ ಎಂದರು.

ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ, ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕ ಆರ್. ಶೇಜೇಶ್ವರ್, ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ವೀರೇಶ ಬಡಿಗೇರ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಡಿ.ನಾಗರಾಜ್, ಪ್ರಾಧ್ಯಾಪಕ ಪ್ರೊ.ಎಫ್.ಟಿ.ಹಳ್ಳಿಕೇರಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.