ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆ ರಚನೆಯಾಗಿ ಐದು ವರ್ಷ ಕಳೆದರೂ ಇನ್ನೂ ಜಿಲ್ಲಾಡಳಿತ ಭವನ ನಿರ್ಮಾಣವಾಗಿಲ್ಲ, ಇದರಿಂದ ಆಡಳಿತ ಮಾತ್ರವಲ್ಲ ಜನರಿಗೆ ಬಹಳ ತೊಂದರೆ ಆಗಿದೆ. ತಕ್ಷಣ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ವಿಜಯನಗರ ಜಿಲ್ಲೆ ಪ್ರಜಾ ಜಾಗೃತಿ ವೇದಿಕೆ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಸಂಘಟನೆಗಳು ಆಗ್ರಹಿಸಿವೆ.

ಈ ಎರಡೂ ವೇದಿಕೆಗಳ ಅಧ್ಯಕ್ಷ ಯು.ಆಂಜನೇಯಲು ಮತ್ತು ಪ್ರಧಾನ ಕಾರ್ಯದರ್ಶಿ ವೈ.ಯಮುನೇಶ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ನಿಯೋಗ ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಕಳುಹಿಸಿಕೊಡಲಾಯಿತು.

ವೈ.ಯಮುನೇಶ್ ಮಾತನಾಡಿ, ಹೊಸ ಜಿಲ್ಲೆ ಉದಯದ ನಂತರ ಹೊಸಪೇಟೆ ಹಾಗೂ ಹಿಂದುಳಿದ ತಾಲೂಕುಗಳಲ್ಲಿ ಸಮಗ್ರ ಅಭಿವೃದ್ಧಿ ಮತ್ತು ಪರಿವರ್ತನೆಯ ಗಾಳಿ ಬೀಸಬಹುದೆಂಬ ಜನರ ನಿರೀಕ್ಷೆ ಹುಸಿಯಾಗಿದೆ, ಏಕೆಂದರೆ ಜಿಲ್ಲಾ ಕೇಂದ್ರಕ್ಕೆ ಸಂಬಂಧಿಸಿದ ಕೆಲವು ಕಚೇರಿಗಳು ಇನ್ನೂ ಬಳ್ಳಾರಿಯಲ್ಲಿಯೇ ಇವೆ ಎಂದರು.

ಎಲ್ಲಾ ಪಕ್ಷಗಳ ಆಳ್ವಿಕೆಯಲ್ಲೂ ಬಜೆಟ್ ಅನುದಾನ ಹಂಚಿಕೆಯಲ್ಲಿ ಜಿಲ್ಲೆಗೆ ಘೋರ ಅನ್ಯಾಯ ಹಾಗೂ ಪಕ್ಷಪಾತ ಮಾಡಲಾಗಿದೆ ಎಂದರು.

ಯು.ಆಂಜನೇಯಲು ಮಾತನಾಡಿ, ನೂತನ ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಕಚೇರಿಗಳನ್ನು ಕೂಡಲೇ ಆರಂಭಿಸುವುದರ ಜೊತೆಗೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಮೂಲಸೌಕರ್ಯಗಳ ಅಭಿವೃಧ್ದಿಗೆ ಜಿಲ್ಲಾ ಖನಿಜ ನಿಧಿ (ಡಿಎಂಎಫ್), ಕರ್ನಾಟಕ ಗಣಿ ಪ್ರದೇಶ ಪುನಶ್ಚೇತನ ಅಭಿವೃದ್ಧಿ ನಿಗಮ (ಕೆಎಂಇಆರ್ಸಿ) ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (ಕೆಕೆಆರ್ಡಿಬಿ) ಹೆಚ್ಚುವರಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಮುಖಂಡರಾದ ಎ.ಪಂಪಣ್ಣ, ಎ.ಜಗನ್ನಾಥ, ಭೀಮಪ್ಪ, ನೀಲಕಂಠಪ್ಪ, ವಿಶ್ವನಾಥ, ಎಚ್.ತಿಪ್ಪೇಸ್ವಾಮಿ, ಶಿವಾನಂದ ಕೌತಾಳ್, ಎಂ.ನಾಗಲಿಂಗಪ್ಪ, ಎಂ.ಬಿ.ಗೌಡಣ್ಣನವರ್, ಎ.ಬಿ.ಬಸವರಾಜ, ಎಂ.ಶಂಕ್ರಪ್ಪ, ಕೆ.ವಿ.ರಾಮಾಲಿ, ಎಸ್.ಎಂ.ಬಾಷಾ, ಇ.ಪ್ರಶಾಂತ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-25-1849445028

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.