ಹೊಸಪೇಟೆ (ವಿಜಯನಗರ): ಜಿಲ್ಲೆಯಾದ್ಯಂತ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಗಳು ಗಮನ ಹರಿಸಿದ್ದು, 6 ತಾಲ್ಲೂಕುಗಳ 740 ಗ್ರಾಮಗಳ ಪೈಕಿ 153 ಗ್ರಾಮಗಳನ್ನು ನೀರಿನ ಸಮಸ್ಯೆ ಉಂಟಾಗಬಹುದಾದ ಪ್ರದೇಶಗಳಾಗಿ ಗುರುತಿಸಲಾಗಿದೆ.

‘ಪ್ರಸ್ತುತ ಜಿಲ್ಲೆಯಲ್ಲಿ 32 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ 5 ಗ್ರಾಮಗಳು, ಹಡಗಲಿ ತಾಲ್ಲೂಕಿನ 3 ಗ್ರಾಮಗಳು ಹಾಗೂ ಹರಪನಹಳ್ಳಿ ತಾಲ್ಲೂಕಿನ 24 ಗ್ರಾಮಗಳು ಸಮಸ್ಯೆಗೆ ಒಳಪಟ್ಟಿವೆ. ಈ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ನಿರಂತರ ನೀರು ಸರಬರಾಜು ಮಾಡಲು ಈಗಾಗಲೇ 41 ಖಾಸಗಿ ಕೊಳವೆಬಾವಿಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಜೊತೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 4 ಟ್ಯಾಂಕರ್ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಬಳಸಲು ಸಿದ್ಧವಾಗಿರಿಸಲಾಗಿದೆ‘ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ತಿಳಿಸಿದ್ದಾರೆ.

ಗ್ರಾಮಗಳಲ್ಲಿನ ಎಲ್ಲಾ ಜಲಮೂಲಗಳನ್ನು ಸ್ವಚ್ಛಗೊಳಿಸಿ, ನೀರಿನ ಗುಣಮಟ್ಟ ಪರಿಶೀಲಿಸಿದ ಬಳಿಕವೇ ನೀರು ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕುಡಿಯುವ ನೀರಿನ ಪೈಪ್ಲೈನ್ಗಳಲ್ಲಿ ಸೋರಿಕೆ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇಲಾಖೆಯ ಶಾಖಾಧಿಕಾರಿಗಳು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 666 ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯ ಮೇಲೂ ವಿಶೇಷ ಗಮನ ಹರಿಸಲಾಗಿದ್ದು, ತಾಂತ್ರಿಕ ದೋಷಗಳು ಕಂಡುಬಂದಲ್ಲಿ ತಕ್ಷಣ ದುರಸ್ತಿ ಕೈಗೊಳ್ಳುವಂತೆ ಸಿಇಒ ಸೂಚಿಸಿದ್ದಾರೆ.

ಅತಿ ಹೆಚ್ಚು ಸಮಸ್ಯೆ ಎದುರಾಗಿರುವ ಹರಪನಹಳ್ಳಿ ತಾಲ್ಲೂಕಿನ ಗ್ರಾಮಗಳಿಗೆ ಸಿಇಒ ಅವರು ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-25-552598027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.