ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಉದ್ಯಮಿಗಳು, ವರ್ತಕರಿಗೆ ಜಿಎಸ್‌ಟಿ ಕಾರ್ಯಾಗಾರ

Last Updated 10 ಮೇ 2022, 10:31 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಜಿಲ್ಲೆಯ ಎಲ್ಲ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಉದ್ಯಮಿಗಳು, ವರ್ತಕರಿಗೆ ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಹೊಸ ನಿಯಮಗಳ ಬಗ್ಗೆ ಗುರುವಾರ (ಮೇ 12) ನಗರದ ಮಲ್ಲಿಗಿ ಹೋಟೆಲ್‌ನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ’ ಎಂದು ವಿಜಯನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಅಧ್ಯಕ್ಷ ಅಶ್ವಿನ್‌ ಕೋತಂಬ್ರಿ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅತಿ ಹೆಚ್ಚಿನ ಹಣಕಾಸಿನ ವಹಿವಾಟು ನಡೆಸುತ್ತಿದ್ದವರಿಗೆ ಜಿಎಸ್‌ಟಿಯಲ್ಲಿ ಇ–ಇನ್‌ವೈಸ್‌ ಕಡ್ಡಾಯಗೊಳಿಸಲಾಗಿತ್ತು. ಈಗ ಎಲ್ಲರಿಗೂ ಅನ್ವಯಿಸುವಂತೆ ಮಾರ್ಪಾಡುಗೊಳಿಸಲಾಗಿದೆ. ಇ–ಇನ್‌ವೈಸ್‌, ಇ–ವೇ ಬಿಲ್‌ ಕುರಿತು ಕಾರ್ಯಾಗಾರದಲ್ಲಿ ತಿಳಿವಳಿಕೆ ಮೂಡಿಸಲಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

‘ಮೇ 12ರಂದು ಬೆಳಿಗ್ಗೆ 9.30ಕ್ಕೆ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಬಿ.ವಿ. ಮುರಳಿಕೃಷ್ಣ ಉದ್ಘಾಟಿಸುವರು. ದಾವಣಗೆರೆ ವಿಭಾಗದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ವಿಶ್ವನಾಥ ಪಾಲ್ಗೊಳ್ಳುವರು. ಟ್ಯಾಲಿ ಸಲ್ಯೂಶನ್ಸ್‌ ಪ್ರೈವೇಟ್‌ ಲಿಮಿಟೆಡ್‌ನ ಎಜಿಎಮ್‌ ಸಿ.ಜಿ. ಷಣ್ಮುಖ ಅವರು ಟ್ಯಾಲಿ ಮೂಲಕ ಇನ್‌ವೈಸ್‌ ಮಾಡುವುದನ್ನು ತಿಳಿಸುವರು. ಜಿಲ್ಲೆಯ ಎಲ್ಲ ಸಣ್ಣ, ಮಧ್ಯಮ ಕೈಗಾರಿಕೆ ಉದ್ಯಮಿಗಳು, ವರ್ತಕರಿಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 300ಕ್ಕೂ ಅಧಿಕ ಸಣ್ಣ ಕೈಗಾರಿಕೆಗಳಿವೆ. ಕೈಗಾರಿಕೆ ಪ್ರದೇಶ ಸ್ಥಾಪನೆಗೆ 500 ಎಕರೆ ಜಾಗ ನೀಡಬೇಕೆಂದು ಜಿಲ್ಲಾಡಳಿತಕ್ಕೆ ಕೋರಿಕೆ ಸಲ್ಲಿಸಲಾಗಿದೆ. ಮರಿಯಮ್ಮನಹಳ್ಳಿ ಹಾಗೂ ಹಗರಿಬೊಮ್ಮನಹಳ್ಳಿ ನಡುವೆ ಜಾಗ ಸಿಗುವ ನಿರೀಕ್ಷೆ ಇದೆ ಎಂದು ಪ್ರಶ್ನೆಗೆ ತಿಳಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಾಕುಬಾಳು, ಖಜಾಂಚಿ ವಿಜಯ ಸಿಂಧಗಿ, ಕಾರ್ಯಕಾರಿಣಿ ಸದಸ್ಯ ಮಹೇಂದ್ರ ಜೈನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT