ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ: ಜುಲೈನಲ್ಲಿ ಜಿ–20 ಶೃಂಗಸಭೆ

ಐತಿಹಾಸಿಕ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆ ಅನಾವರಣಕ್ಕೆ ಸಿದ್ಧತೆ
Published 27 ಮೇ 2023, 6:47 IST
Last Updated 27 ಮೇ 2023, 6:47 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ವಿಶ್ವವಿಖ್ಯಾತ ಹಂಪಿಯಲ್ಲಿ ಜುಲೈನಲ್ಲಿ ನಡೆಯಲಿರುವ ಜಿ–20 ಶೃಂಗಸಭೆ ಹಿನ್ನೆಲೆಯಲ್ಲಿ ಶುಕ್ರವಾರ ಪೂರ್ವ ಸಿದ್ಧತೆ ಕುರಿತು ನಗರದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚವಾಲಯ ಹಾಗೂ ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳ ಜೊತೆ ಸಭೆ ನಡೆಯಿತು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ–20 ಶೃಂಗಸಭೆಗೆ ಆಗಮಿಸುವ ಪ್ರತಿನಿಧಿಗಳಿಗೆ ಸಭಗೆ ಅಗತ್ಯ ಸೌಕರ್ಯ ಒದಗಿಸುವ ಜೊತೆಗೆ ಐತಿಹಾಸಿಕ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆ ಅನಾವರಣಗೊಳಿಸುವ ಕುರಿತು ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದರು.

ಜುಲೈನಲ್ಲಿ ನಡೆಯಲಿರುವ ಶೆರ್ಪಾ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೈಗೊಳ್ಳುವ ಕುರಿತು ಸಚಿವಾಲಯದ ತಂಡದೊಂದಿಗೆ ಸಭೆ ನಡೆಸಲಾಗುತ್ತಿದ್ದು, 200ಕ್ಕೂ ಹೆಚ್ಚು ಪ್ರತಿನಿಧಿಗಳು ಭೇಟಿ ನೀಡಲಿದ್ದಾರೆ. ಅಲ್ಲದೆ ಪಾಲ್ಗೊಳ್ಳುವ ಪ್ರತಿನಿಧಿಗಳಿಗೆ ವಿಶ್ವ ಪಾರಂಪರಿಕ ತಾಣಗಳನ್ನು ಪರಿಚಯಿಸಲು ತೀರ್ಮಾನಿಸಲಾಗಿದೆ ಎಂದರು.

ಇನ್ನು ಹಂಪಿಯ ವಿಜಯವಿಠ್ಠಲ ದೇವಸ್ಥಾನ, ಪುರಂದರ ಮಂಟಪ ಹಾಗೂ ಎದುರು ಬಸವಣ್ಣ ಬಳಿ ವೇದಿಕೆಗೆ ಪರಿಶೀಲನೆ ನಡೆದಿದೆ. ಅಧಿಕಾರಿಗಳು ಈಗಾಗಲೇ ಸ್ಥಳ ವೀಕ್ಷಣೆ ಮಾಡಿದ್ದು, ಎರಡು ಸ್ಥಳ ನಿಗದಿಯಾಗಲಿದೆ. ಜೊತೆಗೆ ಬರುವ ಪ್ರತಿನಿಧಿಗಳಿಗೆ ಸೂಕ್ತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ಆಶಿಶ್ ಸಿನ್ಹಾ ಹಾಗೂ ರಮೇಶ್ ಬಾಬು ಅವರು ಪೂರ್ವ ಸಿದ್ಧತೆ ಕುರಿತು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಂಪಿಯಲ್ಲಿ ನಡೆಯಲಿರುವ ಸಭೆಯನ್ನು ಉನ್ನತ ಮಟ್ಟದಲ್ಲಿ ನಡೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿದ್ದು ಹಂಪಿಯನ್ನು ವಿಶ್ವಮಟ್ಟದಲ್ಲಿ ಪ್ರಸ್ತುತ ಪಡೆಸಲು ಉತ್ತಮ ಅವಕಾಶ ದೊರಕಿದೆ ರಾಮ್ ಪ್ರಸಾತ್ ಮನೋಹರ್ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT