ಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನಲ್ಲಿ ಶನಿವಾರ ಸಂಜೆ ದಿಢೀರ್ ಅಪ್ಪಳಿಸಿದ ರಭಸದ ಬಿರುಗಾಳಿ ಹಾಗೂ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಗ್ರಾಮೀಣ ಭಾಗದಲ್ಲಿ ನೂರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹತ್ತಾರು ಹಳ್ಳಿಗಳು ಕತ್ತಲಲ್ಲಿ ಮುಳುಗಿವೆ. ನಗರ ಪ್ರದೇಶದಲ್ಲೂ ಉತ್ತಮ ಮಳೆಯಾಗಿದೆ.

ತಾಲ್ಲೂಕಿನಾದ್ಯಂತ ಸಂಜೆ ವೇಳೆಗೆ ವಾತಾವರಣದಲ್ಲಿ ಏಕಾಏಕಿ ಬದಲಾವಣೆಯಾಗಿ, ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಲಾರಂಭಿಸಿತು. ಮಳೆಯ ಆರ್ಭಟಕ್ಕೆ ಅಲ್ಲಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಬೆಂಡಿಗೇರೆ ಸಣ್ಣ ತಾಂಡಾದಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 25ಕ್ಕೂ ಹೆಚ್ಚು ಮನೆಗಳಿಗೆ ತೀವ್ರ ಹಾನಿಯಾಗಿದೆ. ಮನೆಯೊಂದರ ಮೇಲೆ ಬೃಹತ್ ಜಾಲಿಮರ ಉರುಳಿಬಿದ್ದಿದೆ. ಘಟನೆಯಲ್ಲಿ ಗಾಯಗೊಂಡಿರುವ ಗುರುಸಿದ್ಧಪ್ಪ, ‘ಮನೆಯ ಮೇಲೆ ಏಕಾಏಕಿ ಬೃಹತ್ ಮರ ಬಿದ್ದಿತು, ಮನೆ ಮಂದಿಯೆಲ್ಲಾ ಹೊರಗೆ ಬಂದು ರಕ್ಷಣೆ ಪಡೆದುಕೊಂಡರು ಎಂದು ಮಾಹಿತಿ ನೀಡಿದರು.

ಗುಂಡಗತ್ತಿ ಗ್ರಾಮದಲ್ಲಿ ರಭಸದ ಗಾಳಿಗೆ ಬೀದಿ ದೀಪದ ಕಂಬಗಳು ಮುರಿದು ಬಿದ್ದಿವೆ. ಬೃಹತ್ ಬೇವಿನ ಮರವೊಂದು ರಸ್ತೆಗೆ ಉರುಳಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಮಳೆ ಆರಂಭವಾಗುತ್ತಿದ್ದಂತೆಯೇ ಎಚ್ಚೆತ್ತ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಸಂಭವಿಸಬಹುದಾದ ದೊಡ್ಡ ಮಟ್ಟದ ವಿದ್ಯುತ್ ಅವಘಡವೊಂದು ತಪ್ಪಿದಂತಾಗಿದೆ. ಅಳಗಂಚಿಕೇರಿಯಲ್ಲೂ ಬಿರುಗಾಳಿ ಸಹಿತ ಮಳೆಯಾಗಿರುವ ವರದಿಯಾಗಿದೆ.

ಶೃಂಗಾರ ತೋಟದಲ್ಲೂ ಧಾರಾಕಾರ ಮಳೆ ಸುರಿದಿದ್ದು, ಮಾದಿಗರ ಕಾಲೊನಿಯ ದೇವಸ್ಥಾನದ ಬಳಿಯಿದ್ದ ಬೃಹತ್ ಮರವೊಂದು ಬುಡಸಮೇತ ಉರುಳಿಬಿದ್ದಿದೆ. ಗ್ರಾಮದಲ್ಲಿ ಹಲವು ಮನೆಗಳ ಮೇಲ್ಛಾವಣಿಗಳು ಗಾಳಿಯ ರಭಸಕ್ಕೆ ಕಿತ್ತುಕೊಂಡು ಹಾರಿಹೋಗಿವೆ.

ಕಂಚಿಕೆರೆ ಸಮೀಪ ರಸ್ತೆಗೆ ಮರಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿತ್ತು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರೇ ಖುದ್ದಾಗಿ ನಿಂತು ಸಾರ್ವಜನಿಕರ ನೆರವಿನೊಂದಿಗೆ ಮರದ ಕೊಂಬೆಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ತಾಲ್ಲೂಕಿನ ಬಾಗಳಿ, ಕಂಚಿಕೇರಿ, ಹಳ್ಳಿಕೇರಿ, ತಾಂಡ, ಸತ್ತೂರು, ಚೌಡಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲೂ ಮರಗಳು ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್ ಕಂಬಗಳು ಧರೆಗುರುಳಿದ್ದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ರಾತ್ರಿಯಿಡೀ ಜನರು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.