ವಿಜಯನಗರ (ಹೊಸಪೇಟೆ): ಸರ್ಕಾರದಿಂದ ಜಾರಿಯಾಗುತ್ತಿರುವ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು ಎಂದು ಕಲಬುರ್ಗಿ ವಿಭಾಗೀಯ ಸಹ ನಿರ್ದೇಶಕರ ಕಚೇರಿಯ ಉಪನಿರ್ದೇಶಕ ಡಾ.ಶರಣಬಸಪ್ಪ ಗಣಜಲಖೇಡ ಹೇಳಿದರು.

ಇಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಯಿ-ಮಗು ಆರೋಗ್ಯಕ್ಕೆ ಮೊದಲ ಆದ್ಯತೆ: ಚಿಕಿತ್ಸೆ ಅರಸಿ ಬರುವ ಗರ್ಭಿಣಿಯರು ಮತ್ತು ಬಾಣಂತಿಯರ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಸಂಪೂರ್ಣವಾಗಿ ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಮಳೆಗಾಲ ಹತ್ತಿರ ಬರುತ್ತಿರುವುದರಿಂದ ಮಲೇರಿಯಾ, ಡೆಂಗು, ಚಿಕನ್ ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸದಾ ಸನ್ನದ್ಧವಾಗಿರಬೇಕು ಎಂದು ಹೇಳಿದರು.

ಡಿಎಚ್ಒ ಡಾ.ಎಲ್.ಆರ್.ಶಂಕರ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸತೀಶ್ ಚಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ, ಶಸ್ತ್ರಚಿಕಿತ್ಸಕ ಡಾ.ಹರಿಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ. ಪಿ. ದೊಡ್ಡಮನಿ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-25-498877955

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.