ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕರಬ್ಬಿಯಲ್ಲಿ ವಾಂತಿ- ಭೇದಿಗೆ ಆರು ಜನ ಸಾವು: ಎಂಜಿನಿಯರ್, ಪಿಡಿಒ ಅಮಾನತು

Last Updated 6 ಅಕ್ಟೋಬರ್ 2021, 10:01 IST
ಅಕ್ಷರ ಗಾತ್ರ

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದವರ ಪೈಕಿ ಆರು ಜನ ಸಾವಿಗೀಡಾಗಿರುವ ಪ್ರಕರಣ ಸಂಬಂಧ ಎಂಜಿನಿಯರ್ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (ಪಿಡಿಒ) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಾನತುಗೊಳಿಸಿ ಬುಧವಾರ ಆದೇಶಿಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ ವಿಭಾಗದ ಕಿರಿಯ ಎಂಜಿನಿಯರ್ ವಿಜಯ ನಾಯ್ಕ, ಮಕರಬ್ಬಿ ಪಿಡಿಒ ಶರಣಪ್ಪ ಅಮಾನತುಗೊಂಡವರು. ಕಲುಷಿತ ನೀರು ಸೇವಿಸಿ ಗ್ರಾಮದ 150ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಈ ಪೈಕಿ ಹೆಚ್ಚಿನ ಚಿಕಿತ್ಸೆಗಾಗಿ 33 ಜನರನ್ನು ಹುಬ್ಬಳ್ಳಿ, ದಾವಣಗೆರೆ, ಗದಗ, ಹಾವೇರಿಯ ಆಸ್ಪತ್ರೆಗಳಿಗೆ ಕಳಿಸಿಕೊಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ 10 ದಿನಗಳ ಅಂತರದಲ್ಲಿ 6 ಜನರು ಸಾವಿಗೀಡಾಗಿದ್ದರು.

ನೀರು, ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯ ಕುರಿತು ಗ್ರಾಮಸ್ಥರು ದೂರಿದ್ದರು. ಆ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ. ಸಿಇಒ ಅವರು ಪಿಡಿಒ ಮತ್ತು ಎಂಜಿನಿಯರ್ ಮೇಲೆ ಕ್ರಮ ಜರುಗಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT