ಹೊಸಪೇಟೆ: ಕೆ.ಆರ್. ಪೇಟೆ ತಾಲ್ಲೂಕು ಕತ್ತರಘಟ್ಟದಲ್ಲಿ ಜಮೀನು ವಿಷಯದಲ್ಲಿ ಜಯಕುಮಾರ್ ಎಂಬ ಪರಿಶಿಷ್ಟ ಸಮುದಾಯದ ಯುವಕನನ್ನು ಹುಲ್ಲಿನ ಮೆದೆಯೊಳಗೆ ಹಾಕಿ ಸಜೀವವಾಗಿ ದಹಿಸಿದ ಘಟನೆಯನ್ನು ಡಿವೈಎಫ್ಐ ಜಿಲ್ಲಾ ಸಮಿತಿ ಖಂಡಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿದೆ.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಈಡಿಗರ ಮಂಜುನಾಥ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ‘ಈ ಕೊಲೆ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು, ನೊಂದ ಕುಟುಂಬಕ್ಕೆ ಸರ್ಕಾರ ₹25 ಲಕ್ಷ ಪರಿಹಾರ, ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು, ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು ಹಾಗೂ ಪರಿಶಿಷ್ಟರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.