ಹೊಸಪೇಟೆ (ವಿಜಯನಗರ): ನೂತನ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಸಂಜೆ ಆದೇಶ ಹೊರಡಿಸಿದೆ.
ಅನಿರುದ್ಧ್ ಪಿ. ಶ್ರವಣ್ ಅವರನ್ನು ಜಿಲ್ಲಾಧಿಕಾರಿ, ಅರುಣ್ ಕೆ. ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಅನಿರುದ್ಧ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿ, ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.
ಅರುಣ್ ಅವರು ಬೆಂಗಳೂರಿನ ಬಿಎಂಟಿಸಿಯಲ್ಲಿ ಸುರಕ್ಷತೆ ಮತ್ತು ವಿಚಕ್ಷಣಾ ದಳದ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಅಕ್ಟೋಬರ್ 2ರಂದು ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭ ನಡೆಯಲಿದೆ. ಅದಕ್ಕೂ ಎರಡು ದಿನಗಳ ಮುಂಚೆಯೇ ರಾಜ್ಯ ಸರ್ಕಾರ ನೂತನ ಜಿಲ್ಲೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇಮಕ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.