ಹೊಸಪೇಟೆ (ವಿಜಯನಗರ): ಇಲ್ಲಿನ ಪುನೀತ್ ರಾಜ್ ಕುಮಾರ್ ಕ್ರೀಡಾಂಗಣದಲ್ಲಿರುವ ದೇಶದ ಎರಡನೇ ಬೃಹತ್ ಧ್ವಜಸ್ತಂಭಕ್ಕೆ ಏರುತ್ತಿದ್ದ ಬೃಹತ್ ಧ್ವಜ ಕುಸಿದು ಬಿದ್ದ ಘಟನೆ ಭಾನುವಾರ ಗಣರಾಜ್ಯೋತ್ಸವ ನಡೆಯುತ್ತಿದ್ದ ವೇಳೆಯೇ ನಡೆದಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಈ ಧ್ವಜವನ್ನು ಸಾಂಕೇತಿಕವಾಗಿ ಏರಿಸಿ ವೇದಿಕೆಗೆ ಬಂದು ಸಂಪ್ರದಾಯಿಕ ಧ್ವಜಾರೋಹಣ ನೆರವೇರಿಸಿದ್ದರು. ಬಳಿಕ ಪರೇಡ್ ವೀಕ್ಷಿಸಿ ಪರೇಡ್ ತಂಡಗಳು ಪಥಸಂಚಲನದಲ್ಲಿ ನೀಡಿದ ಗೌರವ ವಂದನೆ ಸ್ವೀಕರಿಸುತ್ತಿದ್ದ ವೇಳೆ ತ್ರಿವರ್ಣ ಧ್ವಜ ಒಮ್ಮಿಂದೊಮ್ಮೆಲೆ ಕುಸಿದು ಬಿತ್ತು. ಅದೃಷ್ಟವಶಾತ್ ಆ ಸಂದರ್ಭದಲ್ಲಿ ಧ್ವಜಸ್ತಂಭದ ಬುಡದಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿತು.

ಸಚಿವರು ಭಾಷಣ ಕೊನೆಗೊಳಿಸಿದ ಬಳಿಕ, ಧ್ವಜ ಕುಸಿಯಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.