ಹೊಸಪೇಟೆ (ವಿಜಯನಗರ): ವೇತನ ಹಿಂಬಾಕಿ ಪಾವತಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಮಂಗಳವಾರ ಬೆಳಿಗ್ಗೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದಾಗಿ ತಿಳಿಸಿದ್ದರೂ, ನಗರದಲ್ಲಿ ಹಾಗೂ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬೆಳಿಗ್ಗೆಯಿಂದಲೇ ಬಸ್ ಸಂಚಾರ ಸಹಜವಾಗಿದೆ.

ನಗರದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಳೆ ಅರಂಭವಾಯಿತು, ಹೀಗಾಗಿ ಕೆಲವು ಬಸ್ಗಳು ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುವುದು ವಿಳಂಬವಾಯಿತು. ಅದು ಬಿಟ್ಟರೆ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಂಪಿ, ಹುಲಿಗಿ ಮುಂತಾದ ಕಡೆಗಳಿಗೆ ವಿರಳವಾಗಿ ಬಸ್ಗಳು ಓಡಾಡಿದವು.

‘ಜಿಲ್ಲೆಯ ಹರಪನಹಳ್ಳಿಯಲ್ಲಿ ಮಾತ್ರ ಬಸ್ ಸಂಚಾರಕ್ಕೆ ಸ್ವಲ್ಪ ಅಡಚಣೆ ಉಂಟಾಗಿದೆ, ಉಳಿದ ಯಾವ ತಾಲ್ಲೂಕುಗಳಲ್ಲೂ ಸಮಸ್ಯೆ ಇಲ್ಲ, ಬಹುತೇಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ, ಖಾಸಗಿ ಚಾಲಕರ ಸೇವೆಯನ್ನೂ ಪಡೆಯಲಾಗಿದೆ’ ಎಂದು ಕೆಕೆಆರ್ಟಿಸಿ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.