ಹೊಸಪೇಟೆ (ವಿಜಯನಗರ): ಇಲ್ಲಿನ ವಿಜಯನಗರ ಕಾಲೇಜ್ನಲ್ಲಿ ಶನಿವಾರ ಬೃಹತ್ ಉದ್ಯೋಗ ಮೇಳ ನಡೆದಿದ್ದು, 80ಕ್ಕೂ ಅಧಿಕ ಕಂಪನಿಗಳು ಹಾಜರಾಗಿದ್ದವು. ನೋಂದಾಯಿಸಿದ 7,500 ಆಕಾಂಕ್ಷಿಗಳ ಪೈಕಿ 5,286 ಮಂದಿ ಹಾಜರಾಗಿದ್ದು, 2,644 ಮಂದಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗದ ಭರವಸೆ ಸಿಕ್ಕಿದೆ.

ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ ಯೋಜನೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ವಿಜಯನಗರ ಕಾಲೇಜು, ರೈಟ್ ವೇ ಸೊಲ್ಯೂಶನ್ಸ್ ವತಿಯಿಂದ ಈ ಉದ್ಯೋಗ ಮೇಳ ನಡೆಯಿತು.

ಮೇಳವನ್ನು ಉದ್ಘಾಟಿಸಿದ ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿ, ‘ಕಳೆದ ಬಾರಿ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ 3,000 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಅದರಲ್ಲಿ 700 ಜನರಿಗೆ ಉದ್ಯೋಗ ಅವಕಾಶ ದೊರೆತಿದೆ. ಈ ಬಾರಿ ಬೃಹತ್ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಹಾಜರಾಗಿರುವುದು ಖುಷಿಯ ಸಂಗತಿ’ ಎಂದರು.

‘ಪ್ರತಿಷ್ಠಿತ ಕಂಪನಿಯೊಂದು ಜಿಲ್ಲೆಯಲ್ಲಿ ಉದ್ಯಮ ಸ್ಥಾಪಿಸಲು ಉತ್ಸುಕತೆ ತೋರುತ್ತಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ವಿಜಯನಗರ ಮತ್ತು ಬಳ್ಳಾರಿ ಸೇರಿ ಸಣ್ಣ, ಮಧ್ಯಮ ಮತ್ತು ಬೃಹತ್ 64 ಸ್ಟೀಲ್ ಕೈಗಾರಿಕೆಗಳನ್ನು ಒಳಗೊಂಡಿದೆ. ಇದರಿಂದ ಸ್ಥಳೀಯವಾಗಿ ಸುಮಾರು 1 ಲಕ್ಷ ಹಾಗೂ ಜಿಂದಾಲ್ ಕೈಗಾರಿಕಾ ಪ್ರದೇಶದಲ್ಲಿ 35 ರಿಂದ 40 ಸಾವಿರ ಉದ್ಯೋಗಗಳು ಸೃಷ್ಟಿಯಾಗಿದೆ. ಹೀಗೆ ಕಿರ್ಲೋಸ್ಕರ್, ಕಲ್ಯಾಣಿ ಕೈಗಾರಿಕೆಗಳು ಸೇರಿ 50 ಸಾವಿರ ಉದ್ಯೋಗ ಸೃಷ್ಟಿಯಾಗಲಿವೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ‘ಅಭ್ಯರ್ಥಿಗಳು ಯಾವುದೇ ಕಂಪನಿಯಲ್ಲಿ ಉದ್ಯೋಗ ದೊರೆತರೂ ಶ್ರದ್ಧೆ, ಬದ್ಧತೆ ಮತ್ತು ಆಸಕ್ತಿಯಿಂದ ತಮ್ಮ ಜವಾಬ್ದಾರಿ ನಿಭಾಯಿಸಿದಲ್ಲಿ ಯಶಸ್ಸು ಸಿಗಲಿದೆ’ ಎಂದರು.

ಕಲ್ಯಾಣ ಕರ್ನಾಟಕದಲ್ಲೇ ದೊಡ್ಡ ಮೇಳ: ‘ಕಲ್ಯಾಣ ಕರ್ನಾಟಕದಲ್ಲಿಯೇ ನಡೆದಿರುವ ಬೃಹತ್ ಉದ್ಯೋಗ ಮೇಳ ಇದು ಎಂದು ವಿಜಯನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕ ಸಂಸ್ಥೆಯ ಅಧ್ಯಕ್ಷ ಅಶ್ವಿನ್ ಕೊತ್ತಂಬರಿ ತಿಳಿಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ.ಮಹಾಂತೇಶ್ ಎನ್. ಆರಾಧ್ಯಮಠ್ ಅವರು ಬೃಹತ್ ಉದ್ಯೋಗ ಮೇಳದ ವಿಶೇಷತೆಯನ್ನು ವಿವರಿಸಿದರು. ಬಿಎಂಎಂ ಇಸ್ಪಾತ್ ಕಂಪನಿಯ ಮುಖ್ಯಸ್ಥ ಗಣೇಶ್ ಹೆಗ್ಡೆ ಅವರು ಸ್ಥಳೀಯ ಯುವಕರಿಗೆ ಈ ಬೃಹತ್ ಉದ್ಯೋಗ ಮೇಳ ವೇದಿಕೆಯಾಗಿದೆ, ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ವೀರಶೈವ ವಿದ್ಯಾವರ್ಧಕ ಸಂಘದದ ಕಾರ್ಯಕಾರಿ ಸಮಿತಿ ಸದಸ್ಯ ಚೋರನೂರು ಕೊಟ್ರಪ್ಪ ಮಾತನಾಡಿ, ವಿಜಯನಗರ ಕಾಲೇಜು ಇಂತಹ ಕಾರ್ಯಗಳಿಗೆ ಸದಾ ಪ್ರೋತ್ಸಾಹ ನೀಡುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಪ್ರಮುಖರಾದ ಕಾಕುಬಾಳು ರಾಜೇಂದ್ರ, ರೈಟ್ವೇ ಸೊಲ್ಯೂಶನ್ಸ್ನ ಕಿರಣ್, ಪಿಯು ಕಾಲೇಜ್ನ ಪ್ರಾಚಾರ್ಯ ಪ್ರಭುಸ್ವಾಮಿ, ಐಕ್ಯುಎಸಿ ಸಂಯೋಜಕ ರವಿಕಿರಣ್, ಉದ್ಯೋಗ ಕೋಶದ ಅಧಿಕಾರಿ ಸಿಕಂದರ್ ಭಾಷಾ ಇದ್ದರು.

ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರಿ ಉಮೇಶ್, ಕೌಶಲಾಭಿವೃದ್ಧಿ ಜಿಲ್ಲಾ ಅಧಿಕಾರಿ ಹಟ್ಟಪ್ಪ, ಯುವ ಮುಖಂಡ ಎಚ್.ಜಿ.ವಿರೂಪಾಕ್ಷ ಇದ್ದರು.

‘ಕೈಗಾರಿಕಾ ಕಾರಿಡಾರ್ಗೆ 1 ಸಾವಿರ ಎಕರೆ’

ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದ್ದು ಅದಕ್ಕಾಗಿ ಈಗಾಗಲೇ ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ 1 ಸಾವಿರ ಎಕರೆ ಸ್ಥಳ ಗುರುತಿಸಲಾಗಿದೆ. ಇದರಿಂದ ಸ್ಥಳೀಯವಾಗಿ ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದ್ದು ನಿರುದ್ಯೋಗಿ ಯುವಕ ಯುವತಿಯರಿಗೆ ಅನುಕೂಲವಾಗಲಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ಜಿಲ್ಲೆಯಲ್ಲಿ ವಸತಿ ಗೃಹಗಳ ಕೊರತೆ ಇದೆ. ಆದ್ದರಿಂದ ಜಿಲ್ಲೆಯಲ್ಲಿ ವಿವಿಧೆಡೆ 150 ರಿಂದ 200 ಎಕರೆ ಸರ್ಕಾರಿ ಸ್ಥಳ ಗರುತಿಸಿ ಸುಸಜ್ಜಿತವಾದ ಗೆಸ್ಟ್ಹೌಸ್ ನಿರ್ಮಿಸಿ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.