ಬುಧವಾರ, ಸೆಪ್ಟೆಂಬರ್ 22, 2021
21 °C

ವಿಜಯನಗರ: ಆನಂದ್ ಸಿಂಗ್‌ಗೆ ಮತ್ತೆ ಸಚಿವ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್

ಹೊಸಪೇಟೆ (ವಿಜಯನಗರ): ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.

ಆನಂದ್ ಸಿಂಗ್ ಅವರು ಮಂಗಳವಾರವೇ ಬೆಂಗಳೂರಿಗೆ ಪಯಣ ಬೆಳೆಸಿದ್ದಾರೆ. ಬುಧವಾರ ಮಧ್ಯಾಹ್ನ ನಡೆಯಲಿರುವ ಸಂಪುಟ ವಿಸ್ತರಣೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವರು ಎಂದು ತಿಳಿದು ಬಂದಿದೆ.

'ಆನಂದ್ ಸಿಂಗ್ ಅವರಿಗೆ ಸಚಿವ ಸ್ಥಾನ ಸಿಗುವುದು ಖಾತ್ರಿ. ಕೋವಿಡ್ ಇರುವುದರಿಂದ ಕ್ಷೇತ್ರದಿಂದ ಬೆಂಬಲಿಗರು ಬೆಂಗಳೂರಿಗೆ ಹೋಗುತ್ತಿಲ್ಲ' ಎಂದು ಸಿಂಗ್ ಅಳಿಯ, ಯುವ ಮುಖಂಡ‌ ಸಂದೀಪ್ ಸಿಂಗ್ 'ಪ್ರಜಾವಾಣಿ'ಗೆ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ; ಇವತ್ತೇ ನೂತನ ಸಚಿವರ ಪ್ರಮಾಣ | Prajavani

ಉಪಚುನಾವಣೆ ಸೇರಿದಂತೆ ಸತತ‌ ನಾಲ್ಕು ಸಲ ವಿಜಯನಗರ ಕ್ಷೇತ್ರದಿಂದ ಆನಂದ್ ಸಿಂಗ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆಡಳಿತವಿದ್ದಾಗ ಒಟ್ಟು ಹದಿನೇಳು ಜನ ಶಾಸಕರಲ್ಲಿ ಆನಂದ್ ಸಿಂಗ್ ಎಲ್ಲರಿಗಿಂತ ಮೊದಲು ರಾಜೀನಾಮೆ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು