ಶುಕ್ರವಾರ, ಸೆಪ್ಟೆಂಬರ್ 30, 2022
26 °C

ಗಣೇಶ ವಿಸರ್ಜನೆಯಲ್ಲಿ ನಿಯಮ ಮೀರಿ ಡಿ.ಜೆ ಬಳಕೆ; ಆರು ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಗಣೇಶನ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಡಿ.ಜೆ ಬಳಸಿದ್ದಕ್ಕೆ ಜಿಲ್ಲೆಯ ಆರು ಗಣೇಶನ ಮಂಡಳಿಗಳ ವಿರುದ್ಧ ಶನಿವಾರ ಪೊಲೀಸರು ಪ್ರಕರಣ ದಾಖಲಿಸಿ, ವಾಹನಗಳೊಂದಿಗೆ ಡಿ.ಜೆ. ವಶಪಡಿಸಿಕೊಂಡಿದ್ದಾರೆ.

ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು, ಗ್ರಾಮೀಣ ಠಾಣೆ, ಬಡಾವಣೆ ಪೊಲೀಸ್ ಠಾಣೆ ಹಾಗೂ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ತಂಬ್ರಹಳ್ಳಿ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಶುಕ್ರವಾರ ತಡರಾತ್ರಿ ಮೂರನೇ ದಿನ ನಿಯಮ ಮೀರಿ ಡಿ.ಜೆಯೊಂದಿಗೆ ಗಣಪನ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಐದನೇ ದಿನದ ವಿಸರ್ಜನೆ ವೇಳೆಯೂ ಯಾರು ಕೂಡ ನಿಯಮ ಉಲ್ಲಂಘಿಸಬಾರದು. ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು