ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹರಪನಹಳ್ಳಿ: ಉದ್ಯೋಗ ಖಾತ್ರಿ ಕಾರ್ಮಿಕರಿಂದ ಮತದಾನ ಜಾಗೃತಿ

Published 29 ಮಾರ್ಚ್ 2024, 15:10 IST
Last Updated 29 ಮಾರ್ಚ್ 2024, 15:10 IST
ಅಕ್ಷರ ಗಾತ್ರ

ಹರಪನಹಳ್ಳಿ: ತಾಲ್ಲೂಕಿನ ವಿವಿಧೆಡೆ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುವ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರು ಮತದಾನ ಜಾಗೃತಿ ಕಾರ್ಯಕ್ರಮ ನಡೆಸಿದರು.

ತಾಲ್ಲೂಕಿನ ಗುಂಡಗತ್ತಿ, ಹಲುವಾಗಲು, ಬಾಗಳಿ, ಬೆಣ್ಣಿಹಳ್ಳಿ, ತೊಗರಿಕಟ್ಟಿ, ಮತ್ತಿಹಳ್ಳಿ, ಅಡವಿಹಳ್ಳಿ, ಕೂಲಹಳ್ಳಿ, ಚಟ್ನಿಹಳ್ಳಿ, ಚಿಗಟೇರಿ, ದುಗ್ಗಾವತಿ, ಕಡಬಗೆರೆ ಸೇರಿದಂತೆ ವಿವಿಧ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಮೇಟಿಗಳು ಮತ್ತು ಕಾರ್ಮಿಕರು ಮತದಾನ ಜಾಗೃತಿ ಜಾಥಾ ನಡೆಸಿ, ಜನರಲ್ಲಿ ಅರಿವು ಮೂಡಿಸಿದರು.

ನರೇಗಾ ಸಹಾಯಕ ನಿರ್ದೇಶಕ ಯು.ಎಚ್.ಸೋಮಶೇಖರ್ ಮಾತನಾಡಿ, ‘ಚುನಾವಣೆ ಹಬ್ಬವೆಂದು ಭಾವಿಸಿ ಸಂಭ್ರಮಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರು ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಸೆ ಆಮೀಷಕ್ಕೆ ಒಳಗಾಗದೇ ಮತ ಚಲಾಯಿಸಿ’ ಎಂದು ಹೇಳಿದರು.

‘ಲೋಕಸಭಾ ಸಾರ್ವತ್ರಿಕ ಚುನಾವಣೆಯು ಮೇ 7ರಂದು ನಡೆಯಲಿದ್ದು, ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ನರೇಗಾ ಕೂಲಿ ಕಾರ್ಮಿಕರು ಒಂದೇ ವೇಳೆ ವೋಟರ್ ಐಡಿ ಕಾರ್ಡ್ ಕಳೆದುಕೊಂಡಿದ್ದರೂ ನರೇಗಾ ಉದ್ಯೋಗ ಚೀಟಿ ತೋರಿಸಿ ಮತಚಲಾಯಿಸಲು ಅವಕಾಶವಿದೆ. 18 ವರ್ಷ ವಯಸ್ಸಿನವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಿ’ ಎಂದರು.

ಹರಪನಹಳ್ಳಿ ತಾಲ್ಲೂಕು ಬೆಣ್ಣಿಹಳ್ಳಿ ಉದ್ಯೋಗ ಖಾತ್ರಿ ಕಾರ್ಮಿಕರು ಮತದಾನ ಜಾಗೃತಿ ಮೂಡಿಸಿದರು.
ಹರಪನಹಳ್ಳಿ ತಾಲ್ಲೂಕು ಬೆಣ್ಣಿಹಳ್ಳಿ ಉದ್ಯೋಗ ಖಾತ್ರಿ ಕಾರ್ಮಿಕರು ಮತದಾನ ಜಾಗೃತಿ ಮೂಡಿಸಿದರು.

ತಾಂತ್ರಿಕ ಸಂಯೋಜಕ ನಾಗರಾಜ ನಾಯ್ಕ, ತಾಲ್ಲೂಕು ಐಇಸಿ ಸಂಯೋಜಕ ಕೆ.ವಸಿಗೇರಪ್ಪ ಚಾಗನೂರು, ಪಿಡಿಒ ಸಮುದ್ರಿ ಮಂಜುನಾಥ, ತಾಂತ್ರಿಕ ಸಹಾಯಕ ಎಂಜಿನಿಯರ್‌ ಮಹಾಂತೇಶ್ ಎಂ, ಬಿಎಫ್‌ಟಿ ಸೇರಿದಂತೆ ಗ್ರಾ.ಪಂ. ಸಿಬ್ಬಂದಿ, ನರೇಗಾ ಯೋಜನೆ ಮೇಟಿಗಳು ಮತ್ತು ಕೂಲಿ ಕಾರ್ಮಿಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT