ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಿನಹಡಗಲಿಯಲ್ಲಿ ಮಳೆಯಲ್ಲಿ ನೆನೆಯುತ್ತಾ ಮತಗಟ್ಟೆಗಳಿಗೆ ತೆರಳಿದ ಸಿಬ್ಬಂದಿ

Published 9 ಮೇ 2023, 12:51 IST
Last Updated 9 ಮೇ 2023, 12:51 IST
ಅಕ್ಷರ ಗಾತ್ರ

ಹೂವಿನಹಡಗಲಿ (ವಿಜಯನಗರ ಜಿಲ್ಲೆ) : ವಿಧಾನಸಭಾ ಚುನಾವಣೆ ಪ್ರಯುಕ್ತ ಕ್ಷೇತ್ರದ 218 ಮತಗಟ್ಟೆಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಮಂಗಳವಾರ ಚುನಾವಣಾ ಸಿಬ್ಬಂದಿ ಮಳೆಯಲ್ಲೇ ಮತಗಟ್ಟೆಗಳಿಗೆ ತೆರಳಿದರು.

ಪಟ್ಟಣದ ಎಸ್.ಆರ್.ಎಂ.ಪಿ.ಪಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೆರೆಯಲಾಗಿದ್ದ ಮಸ್ಟರಿಂಗ್ ಕೇಂದ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ಅಧಿಕಾರಿಗಳು ವಿದ್ಯುನ್ಮಾನ ಮತಯಂತ್ರ , ದಾಖಲೆ, ಚುನಾವಣಾ ಸಾಮಗ್ರಿಗಳನ್ನು ವಿತರಿಸುತ್ತಿದ್ದಂತೆ ಮಳೆ ಸುರಿಯಲು ಪ್ರಾರಂಭಿಸಿತು. ಕೇಂದ್ರ ಮುಂಭಾಗದಲ್ಲಿ ಹಾಕಿದ್ದ ಶಾಮಿಯಾನ ಗಾಳಿ ಮಳೆಗೆ ಕಳಚಿ ಬಿದ್ದವು. ಮತಯಂತ್ರ, ದಾಖಲೆಗಳನ್ನು ಸಂರಕ್ಷಿಸಿಕೊಳ್ಳಲು ಸಿಬ್ಬಂದಿ ಪರದಾಡಿದರು. ಮಳೆ ನಿಲ್ಲುತ್ತಿದ್ದಂತೆ ಸಿಬ್ಬಂದಿ ಮತದಾನ ಪರಿಕರಗಳೊಂದಿಗೆ ಬಸ್ ಏರಿ ಮತಗಟ್ಟೆಗಳಿಗೆ ತೆರಳಿದರು.

‘ಕ್ಷೇತ್ರದಲ್ಲಿ 96,632 ಪುರುಷರು, 94,624 ಮಹಿಳೆಯರು, 14 ಜನ ಲೈಂಗಿಕ ಅಲ್ಪಸಂಖ್ಯಾತರು ಸೇರಿದಂತದ 1,91,270 ಮತದಾರರಿದ್ದಾರೆ. 218 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಪ್ರತಿ ಮತಗಟ್ಟೆಗೆ ಒಬ್ಬ ಮತಗಟ್ಟೆ ಅಧಿಕಾರಿ, ಸಹಾಯಕ ಅಧಿಕಾರಿ, ಪೊಲೀಸ್, 'ಡಿ' ಗ್ರೂಪ್ ನೌಕರ ಸೇರಿ ಐದು ಜನ ಸಿಬ್ಬಂದಿಯನ್ನು ನೇಮಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ಒಟ್ಟು 1103ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಚುನಾವಣಾಧಿಕಾರಿ ಶರಣಪ್ಪ ಮುದಗಲ್ ತಿಳಿಸಿದರು.

ಕ್ಷೇತ್ರದಲ್ಲಿ 3 ಅತೀ ಸೂಕ್ಷ್ಮ, 38 ಸೂಕ್ಷ್ಮ ಹಾಗೂ 177 ಸಾಮಾನ್ಯ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಪಟ್ಟಣದ ಎಲ್ಲ ಮತಗಟ್ಟೆಗಳು ಸೇರಿದಂತೆ ಕ್ಷೇತ್ರ ವ್ಯಾಪ್ತಿಯಲ್ಲಿ 109 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕ್ಷೇತ್ರದಲ್ಲಿ 19 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಅಳವಡಿಸಿರುವುದರಿಂದ ಅಗತ್ಯ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸುಲಲಿತವಾಗಿ ಮತದಾನ ಪ್ರಕ್ರಿಯೆ ನಡೆಸಲು ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT