ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆಯಲ್ಲಿ ರಣಹದ್ದು ಗೋಚರ

Last Updated 15 ಡಿಸೆಂಬರ್ 2022, 13:32 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಅಪರೂಪದ ‘ಯುರೇಶಿಯನ್‌ ಗ್ರಿಫನ್‌ ವಲ್ಚರ್‌’ (ರಣಹದ್ದು) ಗುರುವಾರ ನಗರದಲ್ಲಿ ಕಾಣಿಸಿಕೊಂಡಿತು.

ರಾಮನಗರ ಸುತ್ತಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ಈ ಜಾತಿಯ ರಣಹದ್ದುಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಈ ಭಾಗದಲ್ಲಿ ಇವುಗಳಿಲ್ಲ. ಆದರೆ, ಚಳಿಗಾಲ ಇರುವುದರಿಂದ ಕೆಲವೊಂದು ವಲಸೆ ಬಂದಿರುವ ಸಾಧ್ಯತೆ ಇದೆ ಎನ್ನುವುದು ಪಕ್ಷಿತಜ್ಞರ ಅಭಿಪ್ರಾಯ.

ಗುರುವಾರ ರಣಹದ್ದು ಅಸ್ವಸ್ಥಗೊಂಡು ನೆಲಕ್ಕೆ ಬಿದ್ದಿತ್ತು. ಅದನ್ನು ಗಮನಿಸಿದ ರಾಣಿಪೇಟೆಯ ಶಾಲಾ ಮಕ್ಕಳು ನೀರು ಹಾಕಿ ಉಪಚರಿಸಿದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವಲಯ ಅರಣ್ಯ ಅಧಿಕಾರಿ ವಿನಯ್‌ ಅವರು ರಣಹದ್ದಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ತಾಲ್ಲೂಕಿನ ಕಮಲಾಪುರ ಸಮೀಪದ ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನಕ್ಕೆ ಕಳುಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT