ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಬಲದಂಡೆ ಕಾಲುವೆಗೆ ನೀರು

Last Updated 11 ಜನವರಿ 2022, 14:08 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಕಾಲುವೆಗೆ (ಎಚ್‌ಎಲ್‌ಸಿ) ಮಂಗಳವಾರ ನೀರು ಹರಿಸಲಾಯಿತು.

ಇತ್ತೀಚೆಗೆ ನಡೆದ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಧಾರದಂತೆ ಕಾಲುವೆಗೆ ನೀರು ಬಿಡಲಾಯಿತು.

ಈ ತಿಂಗಳ 31ರ ವರೆಗೆ ನಿತ್ಯ 750 ಕ್ಯುಸೆಕ್‌ ನೀರು ಹರಿಸಲಾಗುತ್ತದೆ. ಫೆ. 1ರಿಂದ 10ರ ವರೆಗೆ ನೀರು ಹರಿಸುವುದು ನಿಲ್ಲಿಸಲಾಗುತ್ತದೆ. ಫೆ. 11ರಿಂದ 28ರ ವರೆಗೆ ನೀರು ಬಿಡಲಾಗುತ್ತದೆ. ಮಾ. 1ರಿಂದ 10ರ ವರೆಗೆ ನೀರಿನ ಲಭ್ಯತೆ ನೋಡಿಕೊಂಡು ಹರಿಸಲು ನಿರ್ಧರಿಸಲಾಗಿದೆ.

’ಬಲದಂಡೆ ಮೇಲ್ಮಟ್ಟದ ಕಾಲುವೆಯ ಅಚ್ಚುಕಟ್ಟು ಪ್ರದೇಶದ ರೈತರು ಬೆಳೆದು ನಿಂತಿರುವ ಬೆಳೆಗೆ ನೀರು ಉಪಯೋಗಿಸಿ ಬೆಳೆ ಸಂರಕ್ಷಿಸಬೇಕು. ಅಗತ್ಯಕ್ಕೆ ತಕ್ಕಂತೆ ನೀರು ಬಳಸಬೇಕು. ಹೊಸದಾಗಿ ರೈತರು ಯಾವುದೇ ಬೆಳೆ ಬೆಳೆಯಬಾರದು‘ ಕರ್ನಾಟಕ ನೀರಾವರಿ ನಿಗಮ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT